Doddaballapura: ಕಸಾಪದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯದಿನ ಆಚರಣೆ

ದೊಡ್ಡಬಳ್ಳಾಪುರ: ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ದ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200  ವರ್ಷ  ಪೂರೈಸಿದೆ. ಬ್ರಿಟಿಷರ ವಿರುದ್ದ  ಮೊದಲ ಮಹಿಳಾ ಹೋರಾಟಗಾರ್ತಿಗೆ  1824 ರಲ್ಲಿ  ದೊರೆತ ವಿಜಯವು ಆಗಿದೆ ಎಂದು‌ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಟಿ.ಎಸ್. ಸರಸ್ವತಿ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ವಿಜಯದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

1857 ರಲ್ಲಿ ನಡೆದ ಸಿಪಾಯಿ ದಂಗೆಗೂ  ಮೊದಲೇ 1824 ರಲ್ಲಿ  ಬ್ರಿಟಿಷರ ವಿರುದ್ದ  ಹೋರಾಟ ನಡೆಸಿ ಗೆಲುವು ಸಾಧಿಸಿದ  ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮ,  ದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.
 
ಕಿತ್ತೂರು ಸಂಸ್ಥಾನದ ದೇಸಾಯಿ ಧೂಳಪ್ಪ ದೇಸಾಯಿ‌ ಮಗಳಾದಚೆನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಚೆನ್ನಮ್ಮ ಅನಿವಾರ್ಯವಾಗಿ ಕಿತ್ತೂರು  ‌ಸಂಸ್ಥಾನದ  ಮುಖ್ಯ ಸ್ಥಾನದಲ್ಲಿ ಜವಾಬ್ದಾರಿ ನಿರ್ವಹಿಸಬೇಕಾದಗುತ್ತದೆ. ಅದನ್ನು ಚೆನ್ನಮ್ಮ ಧೈರ್ಯವಾಗಿ ಎದುರಿಸಿದ ರೀತಿ ಭಾರತದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದೆ. ಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರಿಗೆ ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು.

ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ.      ಹೆಣ್ಣಿನ ಧೈರ್ಯ, ಸಾಹಸ, ಮಾನಸಿಕ ಮತ್ತು ದೈಹಿಕ ಹೋರಾಟ, ಆಡಳಿತ, ಸ್ವಾಭಿಮಾನ ಮತ್ತು ಸ್ವಾವಲಂಬನೆ‌ ಮುಂತಾದ ವಿಚಾರಗಳು ಬಂದಾಗ ಕಿತ್ತೂರು ರಾಣಿ ಚೆನ್ನಮ್ಮ ಅವರ ನೆನಪು ಬರುತ್ತದೆ. ‌ ಬ್ರಿಟಿಷರ ಬಲಿಷ್ಠವಾದ ಸೈನ್ಯದವಿರುದ್ದ  ರಾಣಿ ಚೆನ್ನಮ್ಮ ತನ್ನ ಸಣ್ಣ ಸೈನ್ಯದೊಂದಿಗೆ ಕೆಚ್ಚೆದೆಯ ಧೈರ್ಯ ಮತ್ತು ಸಾಹಸದಿಂದ ಹೋರಾಡಿದರು. ಆಗ ಆಕೆಗೆ ಅಷ್ಟೇ ಸಮರ್ಥವಾಗಿ, ಅತ್ಯಂತ ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ, ಕೆಚ್ಚೆದೆಯ ಧೈರ್ಯದಿಂದ ಬೆನ್ನೆಲುಬಾಗಿ ನಿಂತು ಹೋರಾಡಿದ್ದು ಸಂಗೊಳ್ಳಿ ರಾಯಣ್ಣ‌ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಭಾರತೀಯ ಮಹಿಳೆಯರು  ಹಿಂದಿನಿಂದಲೂ ಸಾಧಕರ ಸಾಲಿನಲ್ಲಿ  ತಮ್ಮದೇ  ಹೆಜ್ಜೆ ಗುರುತು ಉಳಿಸಿದ್ದಾರೆ.  ಇಂದಿಗೂ ಸಹ  ಬಾಹ್ಯಾಕಾಶಯಾನದಲ್ಲಿ  ಸಾಧನೆ ಮಾಡಿರುವ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಸಹ  ಮಹಿಳೆಯರ ಕೊಡುಗೆ ಅಪಾರವಾಗಿದೆ.  ಬದುಕಿನಲ್ಲಿ ಎದುರಾಗುವ ಎಂತಹ ಪರಿಸ್ಥಿತಿಯಲ್ಲೂ  ಅಸಹಾಯಕರಾಗದೆ, ಧೈರ್ಯವಾಗಿ ಹೋರಾಡಬೇಕು ಎಂಬುದಕ್ಕೆ ಕಿತ್ತೂರು ರಾಣಿ ಚೆನ್ನಮ್ಮ  ಒಂದು ಮಾದರಿಯಾಗಿದ್ದಾರೆ.

ಸಾಹಸಭರಿತ, ಧೈರ್ಯವಂತ, ಸಾವಿಗೆ ಅಂಜದ, ದೇಶಪ್ರೇಮದ ಮಹೋನ್ನತ ಹೆಜ್ಜೆಯಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ತಮ್ಮ‌ ವ್ಯಕ್ತಿತ್ವದಿಂದಲೇ  ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಮಣಿ, ಶಿಕ್ಷಣ ಇಲಾಖೆ ‌ಕ್ಷೇತ್ರ  ಸಂಪನ್ಮೂಲ ವ್ಯಕ್ತಿ ಬಿ.ಆರ್. ಗಂಗಾಧರ್, ದೊಡ್ಡಬಳ್ಳಾಪುರ ತಾಲ್ಲೂಕು   ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ‌‌ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಜಿ.ಸುರೇಶ್, ಕನ್ನಡಪರ ಹೋರಾಟಗಾರರಾದ ಗುರುರಾಜಪ್ಪ, ಚೌಡರಾಜು, ಹರೀಶ್, ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು.

ಕಲಾವಿದರುಗಳಾದ ದರ್ಗಾಜೋಗಿಹಳ್ಳಿ, ಕುಮಾರ್,  ಎಂ.ರಾಮಕೃಷ್ಣ, ಶೋಭಾ, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!