ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ: ಉಪ ಲೋಕಾಯುಕ್ತ ಫಣೀಂದ್ರ

ಬೆಂಗಳೂರು ನಗರ ಜಿಲ್ಲೆ: ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ ಕರ್ತವ್ಯದಲ್ಲಿ ಸತ್ಯ, ನಿಷ್ಠೆ ಹಾಗೂ ಸಮಗ್ರತೆಯನ್ನು ಪ್ರದರ್ಶಿಸಿ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು, ಎಂದು ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ರವರು ಕರೆಕೊಟ್ಟರು.

ಯಲಹಂಕ ಉಪ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಮತ್ತು  ಬೆಂಗಳೂರು ಪೂರ್ವ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ  ಸಾರ್ವಜನಿಕರ ಕುಂದು ಕೊರತೆ,  ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ  ವಿಲೇವಾರಿ  ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ನೀಡುವ ಸವಲತ್ತುಗಳನ್ನು ಪಡೆಯುವ ಹಕ್ಕು ಎಲ್ಲ ನಾಗರೀಕರಿಗೆ ಇದೆ. ಎಲ್ಲರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನದ ಆಶೋತ್ತರದ ಅಡಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಜನರಿಗೆ ಸರ್ಕಾರದ ಸೌಕರ್ಯಗಳು ಸಿಗದೇ ಇದ್ದಲ್ಲಿ, ಆ ಸೌಲಭ್ಯಗಳನ್ನು ಕೊಡಿಸುವ ಕೆಲಸವನ್ನು ಸಂಸ್ಥೆ ಮಾಡುತ್ತದೆ, ಎಂದು ಅವರು ಹೇಳಿದರು.

ಜನರ ಕುಂದುಕೊರತೆಗಳನ್ನು ಬಗೆಹರಿಸುವುದು, ಭ್ರಷ್ಟಾಚಾರ ನಿರ್ಮೂಲನೆ, ನಿಗ್ರಹ ಮಾಡುವುದು ಲೋಕಾಯುಕ್ತ ಸಂಸ್ಥೆಯ ಕಾರ್ಯೋದ್ದೇಶ. ಸರ್ಕಾರದ ಸವಲತ್ತುಗಳು ಜನರಿಗೆ ತಲುಪುತ್ತಿದೆಯೇ? ಎಲ್ಲಿ ಕೆಲಸ ಆಗುತ್ತಿಲ್ಲ? ಯಾವ ಕೆಲಸ ವಿಳಂಬವಾಗುತ್ತಿದೆ ಎಂಬುದನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳ ಮೂಲಕ ಸೌಲಭ್ಯಗಳನ್ನು ಕಲ್ಪಿಸುವ ಕೆಲಸವನ್ನು ನಾವು ಮಾಡುತ್ತೇವೆ.

ಒಂದು ವೇಳೆ ಸೌಕರ್ಯ ನೀಡುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಕರ್ತವ್ಯಲೋಪ ಎಸಗಿದರೆ, ದುರ್ನಡತೆ ಪ್ರದರ್ಶಿಸಿದರೆ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.

ಈ ಕಾಯ್ದೆ ಅಡಿಯಲ್ಲಿ ದೂರು ಸಲ್ಲಿಸಿದ ಕೂಡಲೆ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವುದಿಲ್ಲ. ಸೂಕ್ತ ವಿಚಾರಣೆಯನ್ನು ನಡೆಸಿ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ಅಧಿಕಾರಿಗಳಿಗೆ ಸಾಕಷ್ಟು ಅವಕಾಶವನ್ನು ನೀಡಲಾಗುವುದು. ಅಲ್ಲದೆ ದೂರುದಾರರು ಸುಳ್ಳು ಆರೋಪವನ್ನು ನೀಡಿದಲ್ಲಿ ಅಂತಹ ಪ್ರಕರಣಗಳಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನೂ ಸಹ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಹಲವಾರು ವಲಯಗಳಲ್ಲಿ ಸಾರ್ವಜನಿಕರಿಗೆ ತಮ್ಮ ಹಕ್ಕುಗಳ ಬಗ್ಗೆ ಸಾಕಷ್ಟು ಅರಿವು ಇಲ್ಲದಿರುವ ಕಾರಣ ಇಂತಹ ಕುಂದು ಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮಗಳು ಅವಶ್ಯಕವಾಗಿವೆ. ಇದರ ಸಂಪೂರ್ಣ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಗೌರವಾನ್ವಿತ  ಕರ್ನಾಟಕ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಮಾತನಾಡಿ ರಾಷ್ಟ್ರದ ನಾಲ್ಕನೇ ಸ್ತಂಭವಾಗಿರುವ ಮಾಧ್ಯಮಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಸಮಾಜದ ತಪ್ಪುಗಳನ್ನು ತಿದ್ದಲು ಸಾಧ್ಯ. ತನ್ಮೂಲಕ ಪ್ರಾಮಾಣಿಕ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಈ ಕಾರ್ಯಕ್ರಮದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರದ ತುಷಾರ್ ಗಿರಿನಾಥ್, ಜಿಲ್ಲಾಧಿಕಾರಿಗಳಾದ ಜಿ. ಜಗದೀಶ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಕೆ.ಎಸ್ ಲತಾ ಕುಮಾರಿ, ಬೆಂಗಳೂರು ನಗರ ಈಶಾನ್ಯ ವಿಭಾಗದ ಉಪ ಪೋಲಿಸ್ ಆಯುಕ್ತರಾದ ಸಜೀತ್ ವಿ.ಜೆ, ಯಲಹಂಕ ವಲಯದ ಬಿಬಿಎಂಪಿ ವಲಯ ಆಯುಕ್ತರಾದ ಕರೀಗೌಡ , ಕರ್ನಾಟಕ ಲೋಕಯುಕ್ತದ ಕಾನೂನು ಅಭಿಪ್ರಾಯ -2 ಸಹಾಯಕ ನಿಬಂಧಕರಾದ ಶುಭವೀರ ಬಿ, ಸೇರಿದಂತೆ  ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ದೂರುದಾರರು,  ಸಾರ್ವಜನಿಕರು ಉಪಸ್ಥಿತರಿದ್ದರು

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!