ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಬೆನ್ನಲ್ಲೇ, ST Somashekar ಅವರು ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ, ನಾಮಪತ್ರ ಸಲ್ಲಿಕೆ ಬೆನ್ನಲ್ಲೇ, NDA ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗಿದ್ದು, ಕದನ ಕುತೂಹಲ ಕೆರಳಿಸಿದೆ.
ಈ ಬೆನ್ನಲ್ಲೇ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ (ST Somashekar) ಸ್ಫೋಟಕ ಹೇಳಿಕೆ ನೀಡಿದ್ದು, ಮೈತ್ರಿ ಮುಖಂಡರು ತಳಮಳಗೊಳ್ಳುವಂತೆ ಮಾಡಿದೆ.
ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ST ಸೋಮಶೇಖರ್ ಅವರು, ಸುಮಾರು 8 ಜನ ಬಿಜೆಪಿಯ ಶಾಸಕರು ಶೀಘ್ರವೇ ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂದು ಹೇಳಿದ್ದಾರೆ.
ಆಗಾಗ ಕಾಂಗ್ರೆಸ್ ಕಾರ್ಯಕ್ರಮಗಳ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಸೋಮಶೇಖರ್ ಅವರ ಇಂದಿನ ಹೇಳಿಕೆ ರಾಜಕೀಯದಲ್ಲಿ ಮಹತ್ವದ್ದಾಗಿದ್ದು, ಇವರೂ ಸಹ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದು ಗೊತ್ತೇ ಇದೆ.
ಅಲ್ಲದೆ ಇತ್ತೀಚಿಗೆ ಕೆಲ ಬಿಜೆಪಿ ಶಾಸಕರು ಬಹಿರಂಗವಾಗಿಯೇ ಸಿಎಂ, ಡಿಸಿಎಂ ಪರ ಮಾತನಾಡುತ್ತಿರುವುದು ಸೋಮಶೇಖರ್ ಅವರ ಹೇಳಿಕೆಗೆ ಪುಷ್ಟಿ ನೀಡುವಂತಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬಂದಿದೆ.