ಹರಕೆ ಕುರಿಯಾದ ಸಿ.ಪಿ.ಯೋಗೇಶ್ವರ್‌, ನಿಖಿಲ್‌ ಕುಮಾರಸ್ವಾಮಿ ಗೆಲ್ಲಲಿದ್ದಾರೆ: ಆರ್‌.ಅಶೋಕ ಲೇವಡಿ

ಬೆಂಗಳೂರು; ಸಿ.ಪಿ.ಯೋಗೇಶ್ವರ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್‌ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಲೇವಡಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್‌ ಒಟ್ಟಾಗಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಜೆಡಿಎಸ್‌ ಪಕ್ಷ ಕಾರ್ಯಕರ್ತರ ಸಭೆ ನಡೆಸಿ, ಒಮ್ಮತದಿಂದ ಅಭ್ಯರ್ಥಿಯನ್ನು ಆರಿಸಲಾಗಿದೆ. ಆದರೆ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳದೆ ಸಿ.ಪಿ.ಯೋಗೇಶ್ವರ್‌ ಅವರನ್ನು ಆರಿಸಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದು, ಅದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಎಸ್‌ಸಿ, ಎಸ್‌ಟಿ ಸಮುದಾಯದ ಹಣ ದುರ್ಬಳಕೆಯಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಗಣಿ ಹಗರಣದಲ್ಲಿ ಶಾಸಕ ಸತೀಶ್‌ ಸೈಲ್‌ ತಪ್ಪಿತಸ್ಥರು ಎಂಬುದು ಸಾಬೀತಾಗಿ ಶಿಕ್ಷೆ ನೀಡಲಾಗಿದೆ. ಕಾಂಗ್ರೆಸ್‌ ಲೂಟಿಕೋರರ ಪಾರ್ಟಿ ಎಂಬುದು ಸಾಬೀತಾಗಿದೆ. ಗಣಿ ಹಗರಣ ನಡೆದಿದೆ ಎಂದು ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಪಾದಯಾತ್ರೆ ಮಾಡಿ ನೃತ್ಯ ಮಾಡಿದ್ದರು. ಬಳಿಕ ಕಾಲು ನೋವಿಗೆ ಮಸಾಜ್‌ ಮಾಡಿಸಿಕೊಂಡಿದ್ದರು. ಈಗ ಅವರದ್ದೇ ಪಕ್ಷದ ಶಾಸಕ ಗಣಿಯಲ್ಲಿ ಲೂಟಿ ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ. ಗಣಿಗಳಲ್ಲಿ ಲೂಟಿ ಮಾಡಿದ್ದು ಕಾಂಗ್ರೆಸ್‌ ಪಕ್ಷ ಎಂಬುದು ಜನರಿಗೆ ಗೊತ್ತಾಗಿದೆ ಎಂದರು.

ನಿಖಿಲ್‌ ಕುಮಾರಸ್ವಾಮಿ ಅವರ ಬಗ್ಗೆ ಜನರಿಗೆ ಅನುಕಂಪವಿದೆ. ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಲು ನಾವೆಲ್ಲರೂ ಪ್ರಯತ್ನ ಮಾಡಿದ್ದೆವು. ಆದರೂ ಅವರು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ. ಬಿಜೆಪಿಯಲ್ಲಿ ಹಿರಿಯ ನಾಯಕರಾಗಿದ್ದವರು ಈಗ ಕಾಂಗ್ರೆಸ್‌ನಲ್ಲಿ ಮೂರನೇ ಸಾಲಿನಲ್ಲಿ ಕುಳಿತಿದ್ದಾರೆ.

ಕಾಂಗ್ರೆಸ್‌ ನಾಯಕರು ಅವರನ್ನು ಹರಕೆ ಕುರಿ ಮಾಡಿ ಮುಗಿಸಲಿದ್ದಾರೆ. ಜನರಿಗೆ ಒಳ್ಳೆಯ ನಾಯಕತ್ವ ಬೇಕಾಗಿದೆ. ನಿಖಿಲ್‌ ಕುಮಾರಸ್ವಾಮಿ ಅವರು ಗೆಲ್ಲುವುದು ಸ್ಪಷ್ಟವಾಗಿದೆ. ಬಿಜೆಪಿಯ ಎಲ್ಲ ಕಾರ್ಯಕರ್ತರು ಹಾಗೂ ನಾಯಕರು ಪಣ ತೊಟ್ಟು ಕೆಲಸ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರ 16 ತಿಂಗಳಲ್ಲಿ ಚನ್ನಪಟ್ಟಣ ತಾಲೂಕಿನ ಅಭಿವೃದ್ಧಿಗೆ ಒಂದು ರೂಪಾಯಿ ಹಣ ನೀಡಿಲ್ಲ. ಸಂಬಳ ಕೊಡಲು ಕೂಡ ದುಡ್ಡಿಲ್ಲದೆ ಸರ್ಕಾರ ಪಾಪರ್‌ ಆಗಿದೆ. ಮಳೆ ಹಾನಿಯಾಗಿ ರೈತರು ಕಂಗಾಲಾಗಿದ್ದರೂ ಪರಿಹಾರ ಕೊಡಲು ಕಾಸಿಲ್ಲ. ರಾಜಧಾನಿ ಬೆಂಗಳೂರು ಮುಳುಗುತ್ತಿದ್ದರೂ ಸರ್ಕಾರಕ್ಕೆ ಪ್ರಜ್ಞೆ ಇಲ್ಲ ಎಂದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!