ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಕರೆ

ಬೆಂಗಳೂರು: ಅಸಮಾನತೆಯನ್ನು ಹೋಗಲಾಡಿಸಿ , ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಡಾ II ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾ ಸಂಕಿರ್ಣ ದಲ್ಲಿ ಆಯೋಜಿಸಲಾಗಿದ್ದ ನೂತನ ಒಳಾಂಗಣ ಕ್ರೀಡಾ ಸಂಕೀರ್ಣ ಹಾಗೂ ಮೊದಲನೇಯ ವರ್ಷದ ಬಿ. ಇ. ತರಗತಿಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ರವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ರವರ ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದರು.

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆಯಿದೆ

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ , ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮಾನ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಗೆ ಒತ್ತು

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾ II ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.

ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ, ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು. ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ.

ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ,ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!