ದೊಡ್ಡಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಲಾರಿಗೆ ಬೆಂಕಿ ತಗುಲಿ, ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.
ಟಫೆ ಟ್ರ್ಯಾಕ್ಟರ್ ಇಂಜಿನ್ ಸಾಗಿಸಿ ಮರಳಿ ದಾಬಸ್ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುವ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.