ಸಂಡೂರು: ಸಂಡೂರು ಕಾಂಗ್ರೆಸ್ ಭದ್ರಕೋಟೆ, ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ರಾಜಕೀಯ ಮಾಡಲು ಎಲ್ಲರೂ ಬರುತ್ತಾರೆ ಎಂದು ಸಚಿವ ಸಂತೋಷ ಲಾಡ್ ಅವರು ಪರೋಕ್ಷವಾಗಿ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಸಂತೋಷ್ ಲಾಡ್ ವರ್ಸಸ್ ಜನಾರ್ದನ ರೆಡ್ಡಿ ಎನ್ನುವುದೇನು ಇಲ್ಲ. ಕಾಂಗ್ರೆಸ್ ಭಿನ್ನಾಭಿಪ್ರಾಯ ಸಮಾಧಾನ ಮಾಡಿದ್ದೇವೆ. ಮತದಾನ ಪ್ರಮಾಣದ ಜೊತೆಗೆ ಕಾಂಗ್ರೆಸ್ ಗೆ ಮತವೂ ಹೆಚ್ಚಾಗುತ್ತದೆ ಎಂದರು.
ಸಂಡೂರು ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಕಾರ್ಮಿಕ ಸಚಿವ ಸಂತೋಷ ಲಾಡ್, ಸಂಸದ ತುಕಾರಾಂ, ಮಾಜಿ ಸಚಿವರಾದ ಬಿ.ನಾಗೇಂದ್ರ, ಪಿ.ಟಿ ಪರಮೇಶ್ವರ ನಾಯ್ಕ, ಅಲ್ಲಂ ವೀರಭದ್ರಪ್ಪ, ಶಾಸಕರಾದ ಡಾ.ಎನ್.ಟಿ ಶ್ರೀನಿವಾಸ್, ಬಿ.ಎಂ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು