ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಹೊರ ಬರಲೇಬೇಕು; ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಚನ

ದೊಡ್ಡಬಳ್ಳಾಪುರ: ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಗಳ ಬಗ್ಗೆ ದೃಢವಾದ ತಿಳುವಳಿಕೆ ಇದ್ದಾಗ ಮಾತ್ರ ನಮ್ಮನ್ನು ಯಾರೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಒಂದಲ್ಲ ಒಂದು ದಿನ ಹೊರ ಬರಲೇಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.

ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಹಿಸಿ ಅವರು ಆಶೀರ್ವಚನ ನೀಡಿದರು.

ಇಂದು ಸಮಾಜದಲ್ಲಿ ನಡೆಯುತ್ತಿರುವ ಹಲವು ಅಕ್ರಮಗಳು,ವೈರುಧ್ಯಗಳ ನಡುವೆಯೂ ಧರ್ಮ ತನ್ನದೇ ಆದ ಅಸ್ತಿತ್ವ ಹೊಂದಿದೆ ಎನ್ನುವುದಕ್ಕೆ ಆಸ್ತಿಕ ಸಮಾಜದ ಈ ಸಮಾಗಮ ನಿದರ್ಶನವಾಗಿದೆ. ಆದಿಗುರು ಶಂಕರಾಚಾರ್ಯರು ಪ್ರತಿಪಾದಿಸಿದ ಧರ್ಮ ಸಿದ್ದಾಂತಗಳು ಆಳವಾಗಿ ಬೇರೂರಿವೆ. ಭಗವಂತ ಒಬ್ಬನೇ ಆಗಿದ್ದು, ಆತ ಬೇರೆ ಬೇರೆ ರೂಪಗಳನ್ನು ಅವತರಿಸಿ, ಭಕ್ತನನ್ನು ಕಾಪಾಡುತ್ತಿದ್ದಾನೆ ಎನ್ನುವುದನ್ನು ಶಂಕರಾಚಾರ್ಯರು ನಿರೂಪಿಸಿದ್ದಾರೆ.

ಪ್ರಾಣಿಗಳಿಗಿಂತ ಭಿನ್ನವಾಗಿ ಬದುಕುವ ಮನುಷ್ಯ ಅವುಗಳಿಂದ ಹೊರತಾಗಿ ಬದುಕದಿದ್ದರೆ, ನಮಗೂ ಪ್ರಾಣಿಗಳಿಗೂ ವ್ಯತ್ಯಾಸ ಇರುವುದಿಲ್ಲ. ಈ ದಿಸೆಯಲ್ಲಿ ಧರ್ಮಾಚರಣೆ ಪ್ರಮುಖ ಪಾತ್ರ ವಹಿಸುತ್ತದೆ.

ಮಾನವನ ಆಯುಷ್ಯ 100 ವರ್ಷಗಳು ಎಂದಿಟ್ಟುಕೊಂಡರೆ ಆತ ಮೋಕ್ಷ ಪಡೆಯಲು ಹಲವಾರು ಜನ್ಮಗಳನ್ನು ತಾಳಿ ಬರಬೇಕಿದೆ. ಪ್ರತಿ ಜನ್ಮದಲ್ಲಿಯೂ ಧರ್ಮಾಚರಣೆ ಹಾಗೂ ಪರೋಪಕಾರಗಳನ್ನು ಮಾಡಿದಾಗ ಮಾತ್ರ, ಜನ್ಮ ಸಾರ್ಥಕತೆ ಪಡೆಯುತ್ತದೆ. ಇಲ್ಲವಾದಲ್ಲಿ ಮಾನವ ಜನ್ಮಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಬದುಕಿನಲ್ಲಿ ಸಂಪಾದನೆಯೊಂದೇ ಮುಖ್ಯವಲ್ಲ. ಅದರೊಂದಿಗೆ ನಮ್ಮ ಬದುಕಿನ ಸ್ವರೂಪ ಮುಖ್ಯವಾಗುತ್ತದೆ. ದುಃಖ, ಕಷ್ಟಗಳು ಬರಬಾರದು ಎಂದರೆ ನಾವು ಕಷ್ಟಪಡಬೇಕು. ಅದಕ್ಕಾಗಿ ಪ್ರಯತ್ನ ಪಡಬೇಕು. ಸಾಧನೆ ಮಾಡಬೇಕು. ಹಲವು ಜನ್ಮಗಳ ಆಚರಣೆಯೇ ಕೊನೆಗೆ ಮೋಕ್ಷ ರೂಪ ಪಡೆಯುತ್ತದೆ.

ಭಗವಂತ ನಾನಾ ಅವತಾರಗಳನ್ನು ಎತ್ತಿರುವುದು ಸಹ ಅಧರ್ಮವನ್ನು ಅಳಿಸಿ, ಧರ್ಮವನ್ನು ಉಳಿಸಬೇಕು ಎನ್ನುವ ಉದ್ದೇಶಕ್ಕಾಗಿಯೇ. ಶಂಕರಾಚಾರ್ಯರು ಆತ್ಮ ಮತ್ತು ಪರಮಾತ್ಮ ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ. ಆತ್ಮನೇ ಪರಮಾತ್ಮನು. ಪರಮಾತ್ಮನೇ ಆತ್ಮನು ಎಂದು ಅದ್ವೈತ ಸಿಧ್ಧಾಂತದ ಮೂಲ ಸಾರವನ್ನು ಸಾರಿದರು. ನಮ್ಮ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಧರ್ಮಾಚರಣೆ ಮಾಡುವ ಮೂಲಕ ನಮ್ಮ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ನಮ್ಮ ಧರ್ಮ ಪರಂಪರೆಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ದರ್ಮದರ್ಶಿ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!