ಉತ್ತಮ ಗುಣಮಟ್ಟದ ಮೇವುನ್ನು ಜಾನುವಾರುಗಳಿಗೆ ನೀಡಿದರೆ ರೈತರಿಗೆ ಅಧಿಕ ಲಾಭ

ಬೆಂಗಳೂರು: ಉತ್ತಮ ಗುಣಮಟ್ಟದ ಮೇವುನ್ನು ಜಾನುವಾರುಗಳಿಗೆ ನೀಡುವುದರಿಂದ ಹಾಲು ಉತ್ಪಾದನೆ ಹೆಚ್ಚಾಗಲಿದ್ದು,ಇದರಿಂದ ರೈತರ ಆದಾಯವೂ ಕೂಡ ಅಧಿಕವಾಗಲಿದೆ ಎಂದು ಬೀದರ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಕುಪಪತಿಗಳಾದ ಪ್ರೊ.ಕೆ.ಸಿ.ವೀರಣ್ಣ ಅವರು ರೈತರಿಗೆ ತಿಳಿದರು.

ಇಂದು ನಗರದ ಹೆಬ್ಬಾಳದಲ್ಲಿರುವ ಪಶುವೈದ್ಯಕೀಯ ಕಾಲೇಜು,ಬಾಲಕರ ಹಾಸ್ಟೆಲ್ ಮೈದಾನದಲ್ಲಿ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್. ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ ಮತ್ತು ಭಾರತೀಯ ಡೈರಿ ಅಸೋಸಿಯೇಷನ್-ದಕ್ಷಿಣ ವಲಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮೇವು ಮೇಳ” ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತಾನಾಡಿದರು.

ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ರೈತರು ವಿವಿಧ ಮೇವಿನ ಬೆಳೆಗಳನ್ನು ಬೆಳೆದು ಜಾನುವಾರುಗಳಿಗೆ ಪೋಷಕಾಂಶದ ಮೇವನ್ನು ನೀಡಬೇಕು. ಒಣ ಮೇವುಗಳನ್ನು ಸಂಗ್ರಹಿ ಇಟ್ಟುಕೊಳ್ಳಬೇಕು. ಪ್ರೋಟಿನ್ ಯುಕ್ತ ಮೇವಿನ ಬೆಳೆಗಳ ಮಾಹಿತಿ ಮತ್ತು ಬೀಜಗಳ ಲಭ್ಯವಿದ್ದು ಇದನ್ನು ಎಲ್ಲಾ ರೈತಪಿ ವರ್ಗದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ರೈತರಿಗೆ ಸಲಹೆ ನೀಡಿದರು.

ಬಹಳಷ್ಟು ರೈತರು ಮಾವಿನ ತೋಟ, ಚಿಕ್ಕು ತೋಟ, ತೆಂಗಿನ ತೋಟ, ಹೊಂದಿರುತ್ತಾರೆ, ಗಿಡಗಳು ದೊಡ್ಡದಾದ ಮೇಲೆ ಗಿಡಗಳ ಮಧ್ಯದ ಪ್ರದೇಶವನ್ನು ಉಪಯೋಗಿಸುವುದಿಲ್ಲ ಇಂತಹ ಪ್ರದೇಶದಲ್ಲಿ ಮೇವಿನ ಬೆಳೆಯುವುದರಿಂದ ಹೈನುಗಾರಿಕೆ ಖರ್ಚನ್ನು ಕಡಿಮೆ ಮಾಡಿ ಜಾನುವಾರುಗಳಿಗೆ ಮೇವಿ ಉತ್ತಾದನೆ ಮಾಡಿಕೊಂಡು, ಅಧಿಕ ಲಾಭವನ್ನು ಪಡೆಯಬಹುದು ಎಂದು ಅವರು ತಿಳಿಸಿದರು.

ಮೇಳದಲ್ಲಿ ಹೆಚ್ಚಿನ ಖನಿಜಾಂಶ ಇರುವ, ಬೇಸಿಗೆ–ಮಳೆಗಾಲ ಎರಡೂ ಋತುಗಳಲ್ಲಿ ಹಸಿರು ಮೇವು ನೀಡುವ ‘ಮೇವಿನ ಸಜ್ಜೆ’, ನೆಲ–ಹೊಲದ ಅಗತ್ಯವೇ ಇಲ್ಲದಂತೆ ಮನೆ ಮಹಡಿಯಲ್ಲಿಯೂ ಬೆಳೆಯಬಹುದಾದ ಜಲಕೃಷಿ ಮೇವಿನ ಬೆಳೆ, ಹಲವು ಬಾರಿ ಕಟಾವ್ ಮಾಡಬಹುದಾದ ಹೈಬ್ರಿಡ್ ನೇಪಿಯರ್ ಹುಲ್ಲು, ರೇಷ್ಮೆಗೂ ಮೇವಿಗೂ ಬಳಸಬಹುದಾದ ಹಿಪ್ಪು ನೇರಳೆ (ಮಲ್ಬೆರಿ), ನೇಪಿಯರ್ ಮತ್ತು ಜೋಳವನ್ನು ಕಸಿ ಮಾಡಿದ ಪುಲೆ ಜೈವಂತ್ ಹುಲ್ಲುಗಳು ಗಮನ ಸೆಳೆದವು.

ಮೇವು ಸಹಿತ ವಿವಿಧ ಕೃಷಿಗೆ ಬಳಸುವ ಅಡಿಕೆ ಹಾಳೆ ಗೊಬ್ಬರ, ಹಲಸಿನ ಹಣ್ಣಿನ ಗೊಬ್ಬರ, ಎರೆಹುಳು ಗೊಬ್ಬರ ಸಹಿತ ವಿವಿಧ ತರಹದ ಗೊಬ್ಬರಗಳನ್ನು ಪ್ರದರ್ಶಿಸಲಾಯಿತು.

ಪಾಚಿ ರೀತಿಯಲ್ಲಿ ಬೆಳೆಯುವ ಅಜೋಲ, ಏಕ ಕಟಾವ್ ದ್ವಿದಳ ಮೇವಿನ ಬೆಳೆಗಳಾದ ಗೋವಿನ ಜೋಳ, ಮೇವಿನ ಜೋಳ, ಮೇವಿನ ಅಲಸಂದಿ, ಹುರುಳಿ, ಸೋಯಾ ಅವರೆ, ಬಹುಕಟಾವು/ ಬಹು ವಾರ್ಷಿಕ ದ್ವಿದಳ ಮೇವಿನ ಬೆಳೆಗಳಾದ ಕುದುರೆ ಮಸಾಲೆ, ದಶರಥ ಹುಲ್ಲು, ಬೇಲಿ ಮೆಂತೆ, ನೇಪಿಯರ್ ಹುಲ್ಲು, ಉತ್ತಮವಾಗಿ ಇಳುವರಿ ನೀಡುವ ಗಿರಿಮೇವು, ಗಿನಿ ಹುಲ್ಲು, ರೋಡ್ಸ್ ಹುಲ್ಲು, ಬ್ರೆಕೇರಿಯ ಹುಲ್ಲು, ಕುದುರೆಮೆಂತೆ, ಸ್ಟೈಲೊ, ಸೂಪರ್ ನೇಪಿಯರ್, ಪ್ಯಾರಾ ಹುಲ್ಲು, ಬರ್ಸಿಮ, ಲೂಸರ್ನ್, ಚವಳಿ, ಮರ ಹುಲ್ಲುಗಳಾದ ಸುಬಾಬುಲ್, ಚೊಗಚಿಗಳು ಪ್ರದರ್ಶನಗೊಂಡವು.

ಇದನ್ನು ಓದಿ; ಆಹಾರ ಗುಣಮಟ್ಟದಲ್ಲಿ ಪಾರದರ್ಶಕತೆ ತರಲು ಸ್ಪಾಟ್ ಟೆಸ್ಟ್ ಕಿಯಾಸ್ಕ್ ಸಹಕಾರಿ: ದಿನೇಶ್ ಗುಂಡೂರಾವ್

ಈ ಮೇವು ಮೇಳದಲ್ಲಿ ಮುಖ್ಯ ಅತಿಥಿಗಳಾಗಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ನಿರ್ದೇಶಕರಾದ ಡಾ. ಮಂಜುನಾಥ್ ಎಸ್ ಪಾಳೇಗಾರ್, ಬೆಂಗಳೂರಿನ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ .ಎನ್ ಕೆ ಎಸ್ ಗೌಡ, ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮ ಪ್ರಕಾಶ್, ಕಪಮೀವಿವಿಯ ವ್ಯವಸ್ಥಾಪಕ ಮಂಡಳಿ ಸದಸ್ಯರು, ಸೇರಿದಂತೆ ಇತರೆ ಅಧಿಕಾರಿಗಳು, ರೈತಾಪಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]