ಆರೂಢಿಯಲ್ಲಿ ಕಲಾವಿದರ ಸಂಘದಿಂದ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮ

ದೊಡ್ಡಬಳ್ಳಾಪುರ: ನಮ್ಮ ಕಲೆ, ಸಂಸ್ಕೃತಿ, ಪರಂಪರೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್‍ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿದ್ದು, ಗ್ರಾಮಾಂತರ ಪ್ರದೇಶದಲ್ಲಿಯೂ ಸಾಂಸ್ಕೃತಿಕ ಕಲೆಗಳಿಗೆ ಉತ್ತಮ ವೇದಿಕೆಗಳನ್ನು ಕಲ್ಪಿಸಬೇಕಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ತಿಳಿಸಿದರು.

ತಾಲೂಕಿನ ಆರೂಢಿ ಗ್ರಾಮದ ಸಮುದಾಯ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆದ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅನಕ್ಷರಸ್ಥರು, ಗ್ರಾಮೀಣ ಜನರಿಂದ ರಚಿತವಾದ ಜನಪದ ಸಾಹಿತ್ಯದಲ್ಲಿ ಬದುಕಿನ ಮೌಲ್ಯಗಳು ಅಡಗಿವೆ. ಇದರಿಂದ ನಮ್ಮ ಪರಂಪರೆ ಉಳಿಯುತ್ತಿದೆ. ಆದರೆ ಇಂದು ರಂಗಕಲೆ ಹಾಗೂ ಜನಪದ ಕಲಾ ಪ್ರಕಾರಗಳಲ್ಲಿ ಯುವ ಪೀಳಿಗೆ ಭಾಗವಹಿಸುತ್ತಿರುವುದು ಕಡಿಮೆಯಾಗುತ್ತಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಯುವ ಜನತೆ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು.

ಜಿಲ್ಲೆಯಲ್ಲಿ ಅತಿ ಹೆಚ್ಚು ಮಾಸಾಶನ ಪಡೆಯುತ್ತಿರುವ ಕಲಾವಿದರು ದೊಡ್ಡಬಳ್ಳಾಪುರ ತಾಲೂಕಿನಲ್ಲಿದ್ದಾರೆ. ಇದಕ್ಕೆ ಕಲಾವಿದರ ಸಂಘ ನೆರವು ನೀಡುತ್ತಿರುವುದು ಶ್ಲಾಘನೀಯವಾಗಿದ್ದು, ಮಾಸಾಶನ ಹಾಗೂ ಕಲಾ ಉತ್ತೇಜನದ ಕಾರ್‍ಯಕ್ರಮಗಳ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಭೇಟಿ ಮಾಡುವಂತೆ ಕರೆ ನೀಡಿದರು.

ಸಹಕಾರ ಸಂಘಗಳ ನಿವೃತ್ತ ಜಂಟಿ ನಿಬಂಧಕ ಎಂ.ಡಿ.ನರಸಿಂಹಮೂರ್ತಿ ಮಾತನಾಡಿ, ತೊಗಲು ಬೊಂಬೆಯಾಟ, ಬಯಲಾಟ ಮೊದಲಾದ ಕಲಾಪ್ರಕಾರಗಳು ಇಂದು ನಶಿಸುತ್ತಿವೆ. ಮೊಬೈಲ್‌ಗೆ ದಾಸರಾಗಿರುವ ಇಂದಿನ ಪೀಳಿಗೆ ಹಿರಿಯರನ್ನು ಕಾಲಕ್ಕೆ ತಕ್ಕವರಲ್ಲ ಎಂದು ಜರಿಯುವುದು ಕಾಣುತ್ತಿದೆ. ಬೌದ್ದಿಕ ದಿವಾಳಿತನವಾದರೆ ನಮ್ಮ ವಿನಾಶ ಖಂಡಿತ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸ್ಥಳೀಯರಾದ ಸಾಸಲು ಚಿನ್ನಮ್ಮ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ ಜನಪದ ಕಲಾವಿದರಾಗಿದ್ದು, ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಿದೆ ಎಂದರು.

ಹಿರಿಯ ಕಲಾವಿದ ಹಾಗೂ ತಾಲೂಕು ಕಲಾವಿದರ ಸಂಘದ ಉಪಾಧ್ಯಕ್ಷ ಕೆ.ನರಸಿಂಹಯ್ಯ ಕಾರ್‍ಯಕ್ರಮ ಉದ್ಘಾಟಿಸಿ, ಕಲಾವಿದರಿಗೆ ಸೂಕ್ತ ಉತ್ತೇಜನ ನೀಡಬೇಕಿರುವುದು ಸಮುದಾಯದ ಹೊಣೆಯಾಗಿದೆ. ಪ್ರೋತ್ಸಾಹ ನೀಡಿದರೆ ಉತ್ತಮ ಕಲಾವಿದರು ರೂಪುಗೊಳ್ಳುತ್ತಾರೆ. ಗ್ರಾಮಗಳಲ್ಲಿ ಸಾಂಸ್ಕೃತಿಕ ಕಾರ್‍ಯಕ್ರಮಗಳ ಆಯೋಜನೆ ಮಾಡಲು ಅವಕಾಶ ನೀಡುವುದು ಸಂತಸ ತಂದಿದೆ ಎಂದರು.

ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ ಅದ್ಯಕ್ಷತೆ ವಹಿಸಿದ್ದರು.

ಕಾರ್‍ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ, ತಾಲೂಕು ಕಲಾವಿದರ ಸಂಘದ ಪ್ರಧಾನ ಕಾರ್‍ಯದರ್ಶಿ ಬಿ.ಚಂದ್ರಶೇಖರ್, ಗೌರವ ಅಧ್ಯಕ್ಷ ಎಸ್.ರಾಮಮೂರ್ತಿ. ಉಪಾಧ್ಯಕ್ಷರಾದ ಎಚ್.ಪ್ರಕಾಶ್ ರಾವ್, ಖಜಾಂಚಿ ಎಚ್.ಮುನಿಪಾಪಯ್ಯ, ಸಹ ಕಾರ್‍ಯದರ್ಶಿ ಎ.ಮಂಜುನಾಥ್, ಯಕ್ಷಗಾನ ಕಲಾವಿದ ಕೆ.ಸಿ.ನಾರಾಯಣ್, ಸಲಹಾ ಸಮಿತಿಯ ಎನ್.ವೆಂಕಟೇಶ್, ವೆಂಕಟರಾಜು, ಸಂಚಾಲಕ ಶ್ರೀನಿವಾಸ್, ನಿರ್ದೇಶಕರಾದ ಅಶ್ವತ್ಥನಾರಾಯಣ್, ಕೆ.ಎನ್.ತಮ್ಮಣ್ಣ, ಎನ್.ರವಿಕುಮಾರ್, ಗಂಗಮ್ಮ ಸೇರಿದಂತೆ ಕಲಾವಿದರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾರ್‍ಯಕ್ರಮದಲ್ಲಿ ತಾಲೂಕು ಕಲಾವಿದರ ಸಂಘದಿಂದ ಶಿವರಾಜ್ ನಿರ್ದೇಶನದ ಗೆದ್ದವರು ಯಾರು? ಸಾಮಾಜಿಕ ನಾಟಕ ನಡೆಯಿತು. ವಿವಿಧ ಕಲಾವಿದರಿಂದ ರಂಗಗೀತೆ, ಜನಪದ ಗೀತೆ, ಭಜನೆ, ಭಕ್ತಿಗೀತೆಗಳ ಗಾಯನ ನಡೆಯಿತು.

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]