
ಹಾಸನ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಶುಕ್ರವಾರ ಸಂಜೆ ಹಾಸನಾಂಬೆ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ದೇಗುಲದ ಆಡಳಿತಾಧಿಕಾರಿ ಮಾರುತಿ ಅವರು ಡಿಕೆ ಶಿವಕುಮಾರ್ ಅವರನ್ನು ಸನ್ಮಾನಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಭ ಶುಕ್ರವಾರ ತಾಯಿ ಹಾಸನಾಂಬೆ ದರ್ಶನಕ್ಕೆ ನಾನು ನನ್ನ ಕುಟುಂಬ ಸಮೇತ ಬಂದಿದ್ದೇನೆ. ದೇವಿ ಒಳ್ಳೆಯ ಮಳೆ ಬಂದು ಶಾಂತಿ, ನೆಮ್ಮದಿ ಕೊಡುತ್ತಿದ್ದಾಳೆ ಎಂದರು.
ಸಂಸದ ಶ್ರೇಯಸ್ ಪಟೇಲ್, ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಎಸ್ಪಿ ಮೊಹಮ್ಮದ್ ಸುಜೀತಾ ಇದ್ದರು.