ರೇವಾ: ಪತಿಯೊಂದಿಗೆ ಪ್ರವಾಸಕ್ಕೆ ತೆರಳಿದ್ದ ನವವಿವಾಹಿತ ಮಹಿಳೆಯನ್ನು ಗಂಡನ ಕಣ್ಣೆದುರೇ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಗೆ ಇತ್ತೀಚೆಗಷ್ಟೇ ವಿವಾಹವಾಗಿತ್ತು. ದಂಪತಿ 19-20ರ ವಯೋಮಾನದವರಾಗಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆನ್ನಲಾಗಿದೆ. ಮಹಿಳೆ ತನ್ನ ಪತಿಯೊಂದಿಗೆ ಪಿಕ್ನಿಕ್ ಸ್ಪಾಟ್‌ಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.
ಗುರ್ಹ್ ಕೈಗಾರಿಕಾ ಪ್ರದೇಶದಲ್ಲಿನ ಪ್ರಸಿದ್ಧ ದೇವಾಲಯದಿಂದ ಸುಮಾರು 2 ಕಿಮೀ ದೂರದಲ್ಲಿರುವ ಕಾರಂಜಿ ಬಳಿ ಐವರು ದಂಪತಿಗಳ ಮೇಲೆ ದಾಳಿ ಮಾಡಿದ್ದು, ಪತಿಯ ದಾರದಿಂದ ಕಟ್ಟಿ, ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದು ದೂರಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಐವರಲ್ಲಿ ಒಬ್ಬನ ಕೈ ಮತ್ತು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ ಎಂದು ಸುಳಿವು ನೀಡಿದ್ದಾರೆ.
ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೂ ಕಳುಹಿಸಲಾಗಿದ್ದು, ಪ್ರಕರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿ 5-6 ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆಂದು ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)