
ಬೆಂಗಳೂರು, (channapatna by election); ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು.
ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯಲ್ಲಿ (channapatna by election) ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ; ಪೂಜೆ ವೇಳೆ ಬಲಗಡೆ ಹೂ.. ಕುಮಾರಸ್ವಾಮಿ ಕುಟುಂಬಕ್ಕೆ ಶುಭ ಸೂಚನೆ..?
ಇದೇ ವೇಳೆ ಉಪಚುನಾವಣೆಗಳ (by election) ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಸಿಎಂ ತಿಳಿಸಿದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						