ಚನ್ನಪಟ್ಟಣ: ಉಪಚುನಾವಣೆ ಕಾಂಗ್ರೆಸ್ ಸಮನ್ವಯ ಸಭೆಗೆ ಆಗಮಿಸಿದ್ದ ಕಾರ್ಯಕರ್ತ ಹೃದಯಾಘಾತದಿಂದ (heart attack) ಸಾವನ್ನಪ್ಪಿದ ಘಟನೆ ತಾಲೂಕಿನ ದೊಡ್ಡಮಳೂರು ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದಿದೆ.
ಮಿಣಕೆರೆದೊಡ್ಡಿ ಗ್ರಾಮದ 50 ವರ್ಷದ ಕರಿಯಪ್ಪ ಮೃತಪಟ್ಟವರು. ಗ್ರಾಪಂ ಮಾಜಿ ಅಧ್ಯಕ್ಷರಾಗಿದ್ದ ಅವರು ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಹೃದಯಾಘಾತ (heart attack)ಸಂಭವಿಸಿ ಕುರ್ಚಿಯಲ್ಲಿ ಕುಸಿದುಬಿದ್ದಿದ್ದಾರೆ.
ತಕ್ಷಣ ಅವರನ್ನು ಪಟ್ಟಣದ ಸರಕಾರಿ ಆಸತ್ರೆಗೆ ಕರೆದೊಯ್ಯವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ ನಂತರ ಪರೀಕ್ಷೆ ನಡೆಸಿದ ವೈದ್ಯರು ಅವರು ಮೃತಪಟ್ಟ ವಿಷಯ ತಿಳಿಸಿದ್ದಾರೆ.
ನಂತರ ಗ್ರಾಮಕ್ಕೆ ಮೃತದೇಹ ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಲಾಯಿತು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						