ಎರಡು ಬಾರಿ ಸೋತಿದ್ದೇನೆ. ಅವಕಾಶ ಮಾಡಿಕೊಡಿ; ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಭಾನುವಾರ ಬಿರುಸಿನ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರನ್ನು ಭೇಟಿಯಾದ ನಿಖಿಲ್ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮುಖಂಡರ ಮನವೊಲಿಸಿದರು. ಮಾಕಳಿ ಗ್ರಾಮದಲ್ಲಿ ಮುಖಂಡರ ಮನವೊಲಿಕೆ ಮಾಡುವಲ್ಲಿ ಅವರು ಯಶಸ್ವಿಯಾದರು. ಬಳಿಕ ಎಲ್ಲಾ ಕಾರ್ಯಕರ್ತರು, ಮುಖಂಡರು ನಿಖಿಲ್ ಅವರ ಜತೆ ಪ್ರಚಾರದಲ್ಲಿ ಹೆಜ್ಜೆ ಹಾಕಿದರು.

ಬೆಳಗ್ಗೆಯಿಂದಲೇ ಪ್ರಚಾರದಲ್ಲಿ ತೊಡಗಿದ ಅವರು, ಚನ್ನಪಟ್ಟಣದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ಮನೆಗಳಿಗೆ ಭೇಟಿ ನೀಡಿದ ನಿಖಿಲ್ ಅವರು, ಮೈತ್ರಿಕೂಟವನ್ನು ಗೆಲ್ಲಿಸುವ ನಿಟ್ಟಿನಲ್ಲಿ ನಡೆಸಿದರು. ಬಿಜೆಪಿ ನಗರಸಭೆ ಸದಸ್ಯ ರವೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸವಿದ ನಿಖಿಲ್ ಕುಮಾರಸ್ವಾಮಿ ಅವರು, ವಿವಿಧ ಅಂಶಗಳ ಬಗ್ಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಅವರು, ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಅನಿರೀಕ್ಷಿತ. ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ. ನಾಮಪತ್ರ ಸಲ್ಲಿಸಿದ ನಂತರ ಇದೇ ಪ್ರಥಮ ಬಾರಿಗೆ ಇಂದು ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಜೊತೆ ಮತ ಪ್ರಚಾರ ಮಾಡುತ್ತಿದ್ದೇನೆ ಎಂದು ಮಾಕಳಿ ಗ್ರಾಮದಲ್ಲಿ ಹೇಳಿದರು.

ಕ್ಷೇತ್ರದ ಮೂರು ಪಂಚಾಯಿತಿಗಳ 16ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ. ಕುಮಾರಸ್ವಾಮಿಯವರು ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ದೇವೇಗೌಡರು ಇಗ್ಗಲೂರು ಜಲಾಶಯ ನಿರ್ಮಾಣ ಮಾಡಿದ್ದಾರೆ. ತಾಲೂಕಿನ ನೀರಾವರಿ ಯೋಜನೆಗೆ ಅವರ ಕೊಡುಗೆ ಶಾಶ್ವತವಾಗಿದೆ. ನೀರಾ ಚಳುವಳಿ ವೇಳೆ ದೇವೇಗೌಡರು ಚನ್ನಪಟ್ಟಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿದ್ದರು ಎಂದರು ಅವರು.

ಮಂಡ್ಯ ಹಾಗೂ ರಾಮನಗರದಲ್ಲಿ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಒಬ್ಬ ಯುವಕನಾಗಿ, ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಅದಕ್ಕೆ ಕ್ಷೇತ್ರದ ಜನ ಅವಕಾಶ ಮಾಡಿಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ನನಗೆ ಸೇಡಿನ ರಾಜಕೀಯ, ಜಿದ್ದಾಜಿದ್ದಿನ ರಾಜಕೀಯದಲ್ಲಿ ನಂಬಿಕೆ ಇಲ್ಲ. ಜನತೆಯ ಸೇವೆ ಮಾಡುವ ಒಂದು ಮಾರ್ಗವಾಗಿ ನಾನು ರಾಜಕೀಯವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ನನ್ನನ್ನು ನೀವೆಲ್ಲರೂ ಆಶೀರ್ವಾದ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಶಾಸಕ ಎ.ಮಂಜು, ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಪಕ್ಷದ ರಾಮನಗರ ಜಿಲ್ಲಾಧ್ಯಕ್ಷ ಮಾಗಡಿ ಮಂಜುನಾಥ್, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ಜಯಮುತ್ತು, ಬಿಜೆಪಿ ಜಿಲ್ಲಾಧ್ಯಕ್ಷ ಆನಂದ್ ಸ್ವಾಮಿ ಸೇರಿದಂತೆ ಅನೇಕ ನಾಯಕರು ನಿಖಿಲ್ ಅವರ ಜತೆಯಲ್ಲಿ ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!