ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಐತಿಹಾಸಿಕ ಹಾಸನಾಂಬಾ ದೇವಿಯ ಸನ್ನಿಧಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.
ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಗರ್ಭಗುಡಿಯಲ್ಲಿ ದೇವಿಯ ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆ ದೇವಾಯದ ಅವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಸಂಸದರು, ಶಾಸಕರು ಸೇರಿದಂತೆ ಹಲವರು ಸಿಎಂಗೆ ಸಾಥ್ ನೀಡಿದ್ದಾರೆ.
ಹಾಸನಾಂಬ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ಡಬ್ಬಲ್ ಡೆಕರ್ ಬಸ್ ನಲ್ಲಿ ತೆರಳಿ ಹಾಸನದ ದೀಪಾಲಂಕಾರವನ್ನು ಕಣ್ತುಂಬಿಕೊಂಡರು.
ಪ್ರತಿ ವರ್ಷ ದೀಪಾವಳಿಯ ಸಂದರ್ಭದಲ್ಲಿ 11 ದಿನಗಳ ಕಾಲ ಹಾಸನಾಂಬೆ ದರ್ಶನ ನೀಡುತ್ತಾಳೆ. ದೇವಿ ಸಾರ್ವಜನಿಕ ದರ್ಶನ 4ನೇ ದಿನಕ್ಕೆ ಕಾಲಿಟ್ಟಿದ್ದು ಶಕ್ತಿ ದೇವತೆಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.