ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಯಡಿಯೂರು ವಾರ್ಡ್ ವ್ಯಾಪ್ತಿಯ ಸೌತ್ ಎಂಡ್ ವೃತ್ತದಲ್ಲಿ “ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್” ಅವರ ಆರು ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಇಂದು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ದೇಶದ ಪ್ರತಿಭಾವಂತ ನಟ ಎಂದು ಖ್ಯಾತಿ ಗಳಿಸಿರುವ ಪುನೀತ್ ರಾಜ್ ಕುಮಾರ್ ರವರ ಪುತ್ಥಳಿಯನ್ನು ಸ್ಥಾಪಿಸಲಾಗಿದೆ.
ಪುನೀತ್ ರಾಜ್ ಕುಮಾರ್ ಅಗಲಿಕೆಯಾಗಿ ಮೂರು ವರ್ಷವಾಯಿತು ಅದರು ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ.
ಪುನೀತ್ ರಾಜ್ ಕುಮಾರ್ ರವರ ಅಂತ್ಯಸಂಸ್ಕಾರದಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದರು. ಕಲಾವಿದ ಮತ್ತು ಮಾನವೀಯತೆ ಮೂಲಕ ಜನರ ಪ್ರೀತಿ ಗಳಿಸಿದ ಮೆಚ್ಚಿನ ಹೃದಯವಂತ ನಾಯಕ ಪುನೀತ್ ರಾಜ್ ಕುಮಾರ್ ಸರಳತೆ, ವಿನಯತೆ ಮೂಲಕ ಜನರ ಹೃದಯಗೆದ್ದರು, ನಾನು ಸಹ ರಾಜ್ ಕುಮಾರ್ ರವರ ಅಭಿಮಾನಿ ಎಂದು ಹೇಳಲು ಹೆಮ್ಮೆ ಅನಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್. ಆರ್. ರಮೇಶ್, ಮಾಜಿ ಬಿಬಿಎಂಪಿ ಸದಸ್ಯ ಎ.ಹೆಚ್.ಬಸವರಾಜ್ ಹಾಗೂ ಡಾ.ರಾಜ್ ಕುಮಾರ್ ಕುಟುಂಬದ ಅಭಿಮಾನಿಗಳು ಉಪಸ್ಥಿತರಿದ್ದರು.