ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಸಾರ್ವಜನಿಕರ ತಾಯಿ ಮತ್ತು ಮಕ್ಕಳ ಆಸ್ಪತ್ರೆ (Doddaballapura government hospital) ಆವರಣದಲ್ಲಿ ಖಾಸಗಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ನಿರ್ಮಿಸಿರುವ ಹೊರರೋಗಿಗಳ ವಿಭಾಗ, ರಕ್ತನಿಧಿ ಕೇಂದ್ರ ಮತ್ತು ಡಯಾಲಿಸಿಸ್ ಘಟಕದ ಉದ್ಘಾಟನೆ ನೆರವೇರಿಸಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜು, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಎಜಾಕ್ಸ್ ಎಂಜಿನಿಯರಿಂಗ್ ಲಿ.,ನ ಅಧ್ಯಕ್ಷ ಕೆ.ವಿಜಯ್, ಮಂಜುನಾಥ್ ಸೇರಿದಂತೆ ಅನೇಕರು ಹಾಜರಿದ್ದರು.