DKS: ಶಕ್ತಿ ಯೋಜನೆ ಮರುಚಿಂತನೆಗೆ ಮಹಿಳೆಯರಿಂದಲೇ ಒತ್ತಡ: ಡಿಸಿಎಂ

ಬೆಂಗಳೂರು; “ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸಿದ್ದು,. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DKS) ಅವರು ಹೇಳಿದರು

ವಿಧಾನಸೌಧದ ಮುಂಭಾಗ ಬುಧವಾರ ಐರಾವತ ಕ್ಲಬ್ ಕ್ಲಾಸ್ 2.0 ನೂತನ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ (shakti scheme). ಶೀಘ್ರದಲ್ಲಿ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ ಎಂದರು.

KSRTCಗೆ ಉತ್ತಮ ಹೆಸರು

ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕೆ ಎಸ್ ಆರ್ ಟಿ ಸಿ ಸಂಸ್ಥೆ ಹೆಸರು ಮಾಡಿದೆ. ಕಳೆದ ಒಂದು ವರ್ಷದಲ್ಲಿ 112 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಸಾಧನೆಗೆ ಸಂಸ್ಥೆಯ ನೌಕರರ ಶ್ರಮ ಕಾರಣ ಎಂದರು.

ಇದನ್ನೂ ಓದಿ: Cmsiddaramaiah: ನಾಡದೊರೆ ಹಾಸನಾಂಬೆಗೆ ಮೊರೆ

“ಐರಾವತ ಎಂದರೆ ಇಂದ್ರನ ವಾಹನ, ಆನೆ ಎಂದು ಅರ್ಥ. ಆನೆಯಂತೆ ಬಲಶಾಲಿ ಎಂದು ಅರ್ಥ. ವೋಲ್ವೋ ಸಂಸ್ಥೆಯ ಈ ಬಸ್ಸಿಗೆ 1.60 ಕೋಟಿ ಎಂದು ಸಂಸ್ಥೆಯವರು ಹೇಳಿದ್ದಾರೆ. ಇತ್ತೀಚಿಗೆ ನಾವು ಒಂದು ಕಾರು ತೆಗೆದುಕೊಳ್ಳಬೇಕು ಎಂದರೆ ಒಂದು ಕೋಟಿ ಮೀರುತ್ತದೆ” ಎಂದು ಡಿಕೆ ಶಿವಕುಮಾರ್ (DKS) ತಿಳಿಸಿದರು.

“ಕೆಎಸ್ಆರ್ ಟಿಸಿ ಪ್ರಾರಂಭವಾದಾಗ ಕೇವಲ 120 ಬಸ್ ಗಳು ಇದ್ದವು, ಇಂದು 24,282 ಬಸ್ ಗಳು ಇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6,200 ಬಸ್ ಗಳ ಖರೀದಿಗೆ ಮುಂದಾಗಿದೆ. ಇದರಲ್ಲಿ 3,400 ಬಸ್ ಗಳನ್ನು ಖರೀದಿ ಮಾಡಲಾಗಿದೆ. ಸುಮಾರು 9 ಸಾವಿರ ಡ್ರೈವರ್ ಹಾಗೂ ಕಂಡಕ್ಟರ್ ಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ” ಎಂದರು.

ಒಂದು ಸಾವಿರಕ್ಕೂ ಹೆಚ್ಚು ನೌಕರರ ಕುಟುಂಬಸ್ಥರಿಗೆ ಉದ್ಯೋಗ

“ಅನುಕಂಪದ ಆಧಾರದ ಮೇಲೆ ಒಂದು ಸಾವಿರಕ್ಕೂ ಹೆಚ್ಚು ನೌಕರರ ಕುಟುಂಬಸ್ಥರಿಗೆ ಉದ್ಯೋಗ ನೀಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ನೌಕರರ ಕುಟುಂಬದವರಿಗೆ ಒಂದು ಕೋಟಿ ರೂ. ಪರಿಹಾರ ನೀಡಲಾಗಿದೆ. ಇಡೀ ಭಾರತದಲ್ಲಿಯೇ ಇಲ್ಲದ ಅತ್ಯುತ್ತಮವಾದ ವ್ಯವಸ್ಥೆ ನಮ್ಮಲ್ಲಿದೆ” ಎಂದರು.

ಕರ್ನಾಟಕ ಸಾರಿಗೆ ಸಂಸ್ಥೆಯನ್ನು ವ್ಯವಹಾರಕ್ಕಾಗಿ ಹುಟ್ಟಿಹಾಕಿಲ್ಲ. ನಾಗರಿಕರ ಸೇವೆಗಾಗಿ ಇದನ್ನು ಮೀಸಲಿಡಲಾಗಿದೆ. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ, ಇಂಧನ ಬೆಲೆ ಹೆಚ್ಚಾದ ತಕ್ಷಣ ಟಿಕೆಟ್ ದರವೂ ಹೆಚ್ಚಾಗಬೇಕು ಎನ್ನುವ ನಿಯಮ ಮಾಡಲಾಗಿತ್ತು.

ಸಂಸ್ಥೆಯಲ್ಲಿ ಈಗ ಶಿಸ್ತು ಬಂದಿದೆ. ಚಾಲಕರು ನಿಯಮಕ್ಕೆ ಅನುಸಾರವಾಗಿ ನಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಸುಮಾರು 1.80 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ ಎಂದರು.

ಸರ್ಕಾರಕ್ಕೆ ಒಳ್ಳೆಯ ಹೆಸರು

“ಕೆಎಸ್ ಆರ್ ಟಿಸಿ ಸಂಸ್ಥೆ ಇದ್ದರೆ ಸರ್ಕಾರಕ್ಕೆ ಒಳ್ಳೆಯ ಹೆಸರು. ಖಾಸಗಿಯವರು ಸಂಸ್ಥೆಗೆ ಡಿಸೇಲ್ ಅನ್ನು ಕಡಿಮೆ ದರದಲ್ಲಿ ನೀಡುತ್ತೇವೆ ಎಂದು ಮುಂದೆ ಬಂದಿದ್ದಾರೆ. ಇದರ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ಮುಂದುವರೆಯಲಾಗುವುದು” ಎಂದರು.

“ನಾನು ಈ ಹಿಂದೆ ಶಾಸಕನಾಗಿದ್ದಾಗ ಎರಡು ಮೂರು ಸಲ ಐರಾವತ ಬಸ್ ನಲ್ಲಿ ಪ್ರಯಾಣ ಮಾಡಿದ್ದೆ. ಇಂದು ಲೋಕಾರ್ಪಣೆಯಾಗಿರುವ ಐರಾವತ ಬಸ್ ನೋಡುತ್ತಿದ್ದರೆ ಬಹಳ ಸಂತೋಷವಾಗುತ್ತಿದೆ.

ಚುನಾವಣೆ ಸಮಯದಲ್ಲಿ ಪ್ರಚಾರಕ್ಕಾಗಿ ಇದೇ ಬಸ್ ಗಳನ್ನು ಬಳಸಲಾಗುತ್ತಿತ್ತು. ಅವಕಾಶ ಸಿಕ್ಕಾಗ ನಾನು ಐರಾವತ ಬಸ್ ನಲ್ಲಿ ದೂರ ಪ್ರಯಾಣ ಮಾಡುವೆ. ರಾಮಲಿಂಗಾರೆಡ್ಡಿಯವರೇ ನಮಗೂ ಪ್ರಯಾಣ ಮಾಡಲು ಒಂದು ಅವಕಾಶ ಒದಗಿಸಿ ಕೊಡಿ” ಎಂದರು.

“ರಾಮಲಿಂಗಾರೆಡ್ಡಿ ಅವರು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು, ಕಾಂಗ್ರೆಸ್ ಸರ್ಕಾರಕ್ಕೆ ಉತ್ತಮ ಹೆಸರು ಬರುವಂತೆ ಕೆಲಸ ಮಾಡುತ್ತಿದ್ದಾರೆ. ಸಾರಿಗೆ ವ್ಯವಸ್ಥೆಯಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ” ಎಂದು ಡಿಕೆ ಶಿವಕುಮಾರ್ (DKS) ತಿಳಿಸಿದರು.

ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ (Congress government) ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ (JDS)

[ccc_my_favorite_select_button post_id="110424"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]