Accident: ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು..!

ಬೆಂಗಳೂರು: ಬಿಎಂಟಿಸಿ ಬಸ್ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರನ ತಲೆ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಆತ ಸ್ಥಳದಲ್ಲೇಮೃತಪಟ್ಟಿರುವಘಟನೆ ಜೀವನಭೀಮಾನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಂದಿರಾನಗರದ ರತನ್ ಕುಮಾರ್ (32 ವರ್ಷ) ಮೃತ ಸವಾರ. ಇಂದಿರಾನಗರದ ಸರ್ವಿಸ್ ರಸ್ತೆಯ ಬಿಡಿಎ ಕಾಂಪ್ಲೆಕ್ಸ್‌ ಬಳಿ ಬುಧವಾರ ಬೆಳಗ್ಗೆ ಈ ಘಟನೆ ನಡೆದಿದೆ. ಘಟನೆ ಸಂಬಂಧ ಬಿಎಂಟಿಸಿ ಡಿಪೋ 6ಕ್ಕೆ ಸೇರಿದ ಬಸ್‌ ಚಾಲಕ ನಾಗರಾಜು ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಬಿಎಂಟಿಸಿ ಬಸ್ ಚಾಲಕ ನಾಗರಾಜು ರಾತ್ರಿ ಪಾಳಿ ಕರ್ತವ್ಯ ಮುಗಿಸಿ ಇಂದಿರಾನಗರದ ಡಿಪೋ ಕಡೆಗೆ ತೆರಳುತ್ತಿದ್ದರು. ಈ ವೇಳೆ ಸರ್ವಿಸ್ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ತೆರಳುವಾಗ ಹಿಂದಿನಿಂದ ದ್ವಿಚಕ್ರ ವಾಹನ ದಲ್ಲಿ ಬರುತ್ತಿದ್ದ ರತನ್ ಕುಮಾ‌ರ್, ಬಸ್‌ ಹಿಂದಿಕ್ಕುವ ಭರದಲ್ಲಿ ದ್ವಿಚಕ್ರ ವಾಹನವನ್ನು ವೇಗವಾಗಿ ಚಲಾಯಿಸಿದ್ದಾರೆ.

ಬಲಭಾಗದಲ್ಲಿ ಟೆಂಪೋವೊಂದು ನಿಂತಿ ರುವುದನ್ನು ಗಮನಿಸಿ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ರತನ್ ಕುಮಾರ್ ತಲೆ ಮೇಲೆಯೇ ಬಿಎಂಟಿಸಿ ಬಸ್‌ನ ಬಲಭಾಗದ ಹಿಂಬದಿ ಚಕ್ರ ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಬಂದ ಸಂಚಾರ ಠಾಣೆ ಪೊಲೀಸರು, ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿದ್ದಾರೆ. ಜೀವನಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!