ಬೆಂಗಳೂರು: ಬಿಎಂಟಿಸಿ ಬಸ್ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರನ ತಲೆ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಆತ ಸ್ಥಳದಲ್ಲೇಮೃತಪಟ್ಟಿರುವಘಟನೆ ಜೀವನಭೀಮಾನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಂದಿರಾನಗರದ ರತನ್ ಕುಮಾರ್ (32 ವರ್ಷ) ಮೃತ ಸವಾರ. ಇಂದಿರಾನಗರದ ಸರ್ವಿಸ್ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ಬಳಿ ಬುಧವಾರ ಬೆಳಗ್ಗೆ ಈ ಘಟನೆ ನಡೆದಿದೆ. ಘಟನೆ ಸಂಬಂಧ ಬಿಎಂಟಿಸಿ ಡಿಪೋ 6ಕ್ಕೆ ಸೇರಿದ ಬಸ್ ಚಾಲಕ ನಾಗರಾಜು ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ಬಿಎಂಟಿಸಿ ಬಸ್ ಚಾಲಕ ನಾಗರಾಜು ರಾತ್ರಿ ಪಾಳಿ ಕರ್ತವ್ಯ ಮುಗಿಸಿ ಇಂದಿರಾನಗರದ ಡಿಪೋ ಕಡೆಗೆ ತೆರಳುತ್ತಿದ್ದರು. ಈ ವೇಳೆ ಸರ್ವಿಸ್ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ತೆರಳುವಾಗ ಹಿಂದಿನಿಂದ ದ್ವಿಚಕ್ರ ವಾಹನ ದಲ್ಲಿ ಬರುತ್ತಿದ್ದ ರತನ್ ಕುಮಾರ್, ಬಸ್ ಹಿಂದಿಕ್ಕುವ ಭರದಲ್ಲಿ ದ್ವಿಚಕ್ರ ವಾಹನವನ್ನು ವೇಗವಾಗಿ ಚಲಾಯಿಸಿದ್ದಾರೆ.
ಬಲಭಾಗದಲ್ಲಿ ಟೆಂಪೋವೊಂದು ನಿಂತಿ ರುವುದನ್ನು ಗಮನಿಸಿ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ರತನ್ ಕುಮಾರ್ ತಲೆ ಮೇಲೆಯೇ ಬಿಎಂಟಿಸಿ ಬಸ್‌ನ ಬಲಭಾಗದ ಹಿಂಬದಿ ಚಕ್ರ ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಬಂದ ಸಂಚಾರ ಠಾಣೆ ಪೊಲೀಸರು, ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿದ್ದಾರೆ. ಜೀವನಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.