ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಕೊಡಿಗೇಹಳ್ಳಿ ಸಮೀಪದ ಮೇಸ್ಟ್ರು ಮನೆ ಕ್ರಾಸ್ ಬಳಿ ಸಂಭವಿಸಿದೆ.
ಸುಮಾರು 55 ರಿಂದ 60 ವರ್ಷದ ಮಹಿಳೆ ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎನ್ನಲಾಗುತ್ತಿದೆ.
ಮಹಿಳೆಯ ಗುರುತು ಪತ್ತೆಯಾಗಿಲ್ಲವಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.