ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡದ ಮೊಟ್ಟಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿ, ಪುಷ್ಪಾರ್ಚನೆ ನೆರವೇರಿಸಿದರು.
“ಕರ್ನಾಟಕ ಸಂಭ್ರಮ-50’ರ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸುವ ಮೂಲಕ ಈ ಸವಿನೆನಪನ್ನು ಶಾಶ್ವತವಾಗಿಡುವುದು ಯೋಜನೆಯ ಉದ್ದೇಶ
ಕನ್ನಡದ ಮೊದಲ ಶಿಲಾ ಶಾಸನ
ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಬರಹ ಇದರಲ್ಲಿತ್ತು. ಇದು ಕ್ರಿ.ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ.
ಇದರ ಬಗ್ಗೆ ಸಾಕಷ್ಟು ಅಧ್ಯಯನ-ಅವಲೋಕನಗಳು ನಡೆದಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ಸ್ವರೂಪದಲ್ಲಿ ಇರಿಸಲಾಗಿದೆ.
ಹಲ್ಮಿಡಿ ಶಾಸನದ ಪ್ರತಿಕೃತಿ
-ಎತ್ತರ: ನಾಲ್ಕೂವರೆ ಅಡಿ
-ಅಗಲ: 2 ಅಡಿ
-ದಪ್ಪ: 6 ಇಂಚು
-ತೂಕ: 450 ರಿಂದ 500 ಕಿಲೋ