ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ರಾಜ್ಯೋತ್ಸವ.. ಕನ್ನಡ ಅಧ್ಯಾಪಕರಿಗೆ ಸನ್ಮಾನ

ದೊಡ್ಡಬಳ್ಳಾಪುರ: ಕನ್ನಡಾಂಬೆಯ ಮಕ್ಕಳಾದ ನಾವು ಕರ್ನಾಟಕಕ್ಕೆ ಆಗಮಿಸುವ ಅನ್ಯ ಭಾಷಿಗರಿಗೆ ಕನ್ನಡವನ್ನು ಕಲಿಸಿ, ನಾವು ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ವಿಸ್ತರಿಸಬೇಕು ಎಂದು ಶ್ರೀ ದೇವರಾಜ್ ಅರಸ್ ಎಜುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಹೇಳಿದರು.

ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಕ್ಯಾಂಪಸ್ ಹಾಗೂ ಶ್ರೀ ದೇವರಾಜ್ ಅರಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾವು ಕೇವಲ ನವೆಂಬರ್ ಕನ್ನಡಿಗರಾಗದೆ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲಿ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ ನುಡಿ, ಸಂಸ್ಕೃತಿ ಪರಂಪರೆ ಉಳಿಸಲು ಕನ್ನಡಿಗರಾದ ನಾವುಗಳು ಸದಾ ಕಟಿಬದ್ಧರಾಗಬೇಕು ಎಂದರು.

ಶ್ರೀ ದೇವರಾಜ್ ಅರಸ್ ಅಂತರರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲ ಧನಂಜಯ್ ಮಾತನಾಡಿ, ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳ. ನದಿಗಳು ಹರಿಯುವ, ಸಾಧು-ಸಂತರು-ದಾಸರು- ಶಿವಶರಣರು – ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರಿಗೆ ಒಂದು ಧೀಮಂತ ಶಕ್ತಿ ಇದೆ, ಕರ್ನಾಟಕದ ಹಿತವನ್ನು ಕನ್ನಡವನ್ನು ವಿರೋಧಿಸುವ ವ್ಯಕ್ತಿ ಎಷ್ಟೇ ದೊಡ್ಡ ರಾಷ್ಟ್ರ ಭಕ್ತನಾದರೂ ಅವನನ್ನು ಕನ್ನಡದ ಮನಸುಗಳು ನಿರಾಕರಿಸಬೇಕು. ನಮ್ಮ ಭಾಷೆಯನ್ನು ಬೆಳೆಸಲು ಶ್ರದ್ಧೆ ಎಂಬ ನೀರೆರೆದು ಭಾಷೆ ಎಂಬ ಮರವನ್ನು ಬೆಳೆಸಬೇಕು. ನಮ್ಮ ನಾಡಗೀತೆಯಲ್ಲಿ ದೇಶಭಕ್ತಿಯೊಡನೆ ರಾಜ್ಯದ ಮೇಲಿನ ಪ್ರೀತಿಯನ್ನು ಹೆಣೆಯಲಾಗಿದೆ, ಅಖಂಡ ಭಾರತದ ಕಲ್ಪನೆಯನ್ನು ಮಾಡಿಕೊಂಡಿರುವಂತಹ ಶ್ರೇಯಸ್ಸು ನಮ್ಮ ಕವಿಗಳಿಗೆ ಸಲ್ಲುತ್ತವೆ ಎಂದರು.

ಶ್ರೀದೇವರಾಜ್ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಮಾತನಾಡಿ, ಆಲೂರು ವೆಂಕಟರಾವ್ 1905ರಲ್ಲಿ ಕರ್ನಾಟಕ ಏಕೀಕರಣ ಚಳುವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸು ಕಂಡ ಮೊದಲ ವ್ಯಕ್ತಿ, ಕರ್ನಾಟಕದ ಇತಿಹಾಸ ಕಲೆ, ಸಾಹಿತ್ಯ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕ ಎಂಬ ಅರಿವು ಮೂಡಿಸುವ ಕಾರ್ಯಕ್ರಮಗಳು ಜರುಗಬೇಕು, ನುಡಿದಂತೆ ನಡೆವ ಭಾಷೆ ನಮ್ಮ ಕನ್ನಡ ಭಾಷೆ, ಶಬ್ದಕ್ಕೂ ಹಾಗೂ ಅಭಿವ್ಯಕ್ತಿಗೂ ಸಂಬಂಧವಿರುವ ಶ್ರೀಮಂತವಾದ ಭಾಷೆ ಕನ್ನಡ ಭಾಷೆ, ಆದ್ದರಿಂದಲೇ ಸಿರಿಗನ್ನಡಂ ಗೆಲ್ಗೆ ಎಂದು ಹೇಳುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ದೇವರಾಜ್ ಅರಸ್ ಸಮೂಹ ಶಿಕ್ಷಣ ಸಂಸ್ಥೆಯ ಎಲ್ಲಾ ಕನ್ನಡ ಅಧ್ಯಾಪಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್, ಲಯನ್ ಎಂ.ಆರ್. ಶ್ರೀನಿವಾಸ್ ಲಯನ್ ಎಂ. ಎ. ನಾಗರತ್ನ, ವೀರಭದ್ರಗೌಡ, ಶೈಕ್ಷಣಿಕ ಘಟಕಗಳ ಎಲ್ಲಾ ಪ್ರಾಂಶುಪಾಲರುಗಳು, ಉಪ ಪ್ರಾಂಶುಪಾಲರುಗಳು, ಮುಖ್ಯಸ್ಥರುಗಳು, ಪ್ರಾಧ್ಯಾಪಕರುಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!