ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು BJP ಪಿತೂರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ?

ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ. ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿಯೂ ನೋಟಿಸ್ ನೀಡಲಾಗಿತ್ತು. ಈ ವಿವರಗಳನ್ನು ನನ್ನ ಸಹದ್ಯೋಗಿಗಳಾಗಿರುವ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ ಮೊದಲಾದವರು ಮಾಧ್ಯಮಗಳಿಗೆ ನೀಡಿದ್ದಾರೆ.

ಬಿಜೆಪಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ ‘‘ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು, ಆ ಆಸ್ತಿಯನ್ನು ಹಲವರು ಕಬಳಿಸಿದ್ದಾರೆ, ಅದನ್ನು ಒಂದೊಂದು ಇಂಚು ಬಿಡದೆ ವಾಪಸು ಪಡೆಯಬೇಕು, ಇಲ್ಲದೆ ಇದ್ದರೆ ಅಲ್ಲಾಹುವಿನ ದೃಷ್ಟಿಯಲ್ಲಿ ನೀವು ತಪ್ಪಿತಸ್ಥರಾಗುತ್ತಿರಿ’’ ಎಂದು ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಅತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ.

ರಾಜ್ಯ ಬಿಜೆಪಿಯಲ್ಲಿ ಸರಣಿ ಪಟಾಕಿಗಳಂತೆ ಪ್ರತಿನಿತ್ಯ ಭಿನ್ನಮತ ಸ್ಪೋಟಗೊಳ್ಳುತ್ತಿದೆ. ಪರಸ್ಪರ ಆರೋಪಗಳನ್ನು ಮಾಡುವ ಮೂಲಕ ಈ ಪಕ್ಷದ ನಾಯಕರು ರಾಜ್ಯದ ಜನರ ಎದುರು ಬೆತ್ತಲಾಗುತ್ತಿದ್ದಾರೆ. ಈ ಜಗಳ ಬಗೆಹರಿಸುವ ಯಾವ ಪ್ರಯತ್ನವನ್ನೂ ಮಾಡದ ಅವರ ಪಕ್ಷದ ಹೈಕಮಾಂಡ್ ದೂರ ನಿಂತು ಚಂದ ನೋಡುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಎಲ್ಲ ಜಾತಿ ಮತ್ತು ಧರ್ಮದಲ್ಲಿರುವ ಬಡವರು, ರೈತರು, ಮಹಿಳೆಯರು, ಕಾರ್ಮಿಕರು ಫಲಾನುಭವಿಗಳಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ.

ಇದಕ್ಕಾಗಿ ಒಂದೆಡೆ ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು ರಾಜ್ಯದ ಸಣ್ಣಪುಟ್ಟ ನಾಯಕರ ವರೆಗೆ ಎಲ್ಲರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ, ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ನ್ಯಾಯಬದ್ಧವಾಗಿ ನಮಗೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯಲ್ಲಿನ ಪಾಲು ಮತ್ತು ಅನುದಾನ ನೀಡದೆ ಅನ್ಯಾಯ ಮಾಡುತ್ತಿದೆ. ಇಂತಹ ಬೆದರಿಕೆ ಮತ್ತು ಒತ್ತಡದ ತಂತ್ರಕ್ಕೆ ನಾವು ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನುಡಿದಂತೆ ನಡೆಯುತ್ತೇವೆ ಮತ್ತು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ.

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಧ್ಯಮಗಳ ಮೂಲಕ ಎಷ್ಟೇ ಸುಳ್ಳು ಆರೋಪಗಳನ್ನು ಮಾಡಿದರೂ ಈ ಯೋಜನೆಗಳಿಂದ ಸಂತೃಪ್ತರಾಗಿರುವ ಫಲಾನುಭವಿಗಳು ಇದಕ್ಕೆ ಕಿವಿಗೊಡದೆ ಇರುವುದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ.

ಸುಳ್ಳು ಪ್ರೊಪಗಾಂಡದ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಕೋಮು ಸಂಘರ್ಷವನ್ನು ಸೃಷ್ಟಿ ಮಾಡಿ ಅದರಿಂದ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಹುಟ್ಟು ಗುಣವಾಗಿದೆ. ಇದರ ಹೊರತಾಗಿ ಈ ಪ್ರತಿಭಟನೆಯಲ್ಲಿ ಯಾವ ರೈತರ ಹಿತಾಸಕ್ತಿಯ ರಕ್ಷಣೆಯ ಸದುದ್ದೇಶ ಇಲ್ಲ. ಈ ಪ್ರತಿಭಟನೆಯಿಂದ ರಾಜ್ಯದ ಸೌಹಾರ್ದತೆಗೆ ಭಂಗ ಉಂಟಾಗಬಹುದೇ ಹೊರತು ರೈತರಿಗೆ ಯಾವ ಲಾಭವೂ ಇಲ್ಲ ಎನ್ನುವುದನ್ನು ಜನತೆ ಅರ್ಥಮಾಡಿಕೊಳ್ಳಬೇಕು.

ರಾಜ್ಯದ ಪ್ರಜ್ಞಾವಂತ ಜನತೆ ಇಂತಹ ಕಿಡಿಗೇಡಿತನದ ರಾಜಕೀಯವನ್ನು ತಿರಸ್ಕರಿಸಿ ನಮ್ಮ ಅಭಿವೃದ್ದಿ ಪರ ರಾಜಕೀಯದ ಪರವಾಗಿ ನಿಲ್ಲಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರಾಜಕೀಯ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಏ.15) ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಿರ್ಮಾಣ ವಾಗಿರುವ ಮಂದಿರದ ಭೈರವೈಕ್ಯ ಉದ್ಘಾಟನೆ ಮಾಡಲಿದ್ದಾರೆ.

[ccc_my_favorite_select_button post_id="120962"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]