ಬೈಲಹೊಂಗಲ: ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೊನಿ ಶಾಲಾ ಮೈದಾನದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು 23 ವರ್ಷದ ರವಿ ತಿಮ್ಮನ್ನವರ ಎಂದು ಗುರುತಿಸಲಾಗಿದ್ದು, 13ಕ್ಕೂ ಹೆಚ್ಚು ದುಷ್ಕರ್ಮಿಗಳ ತಂಡ ಕುಡಗೋಲು, ಮದ್ಯದ ಬಾಟಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.
ರಕ್ತ ಮಡುವಿನಲ್ಲಿ ಪ್ರಜ್ಞೆತಪ್ಪಿದ್ದ ಯುವಕನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.