ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ: ಆರ್‌.ಅಶೋಕ

ಬೆಂಗಳೂರು: ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ವಕ್ಫ್‌ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಆರ್‌.ಪುರದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್‌ ಅಹ್ಮದ್‌ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್‌ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು.

ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ ಮೇಲೆ ಟೋಪಿ ಹಾಕುತ್ತಾರೆ. ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ನೀಡುತ್ತೇನೆಂದು ಹೇಳಿ ದಲಿತರ ಹಣ ಲೂಟಿ ಮಾಡಿದ್ದಾರೆ. ಕಾಂಗ್ರೆಸ್‌ಗೆ ಹಿಂದೂಗಳು ಮತ ನೀಡಿಲ್ಲವೇ? ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ? ಎಂದು ಪ್ರಶ್ನಿಸಿದರು.

ಬಾಬರ್‌, ಔರಂಗಜೇಬ ಮೊದಲಾದ ಮತಾಂಧ ರಾಜರು ವಕ್ಫ್‌ ಬೋರ್ಡ್‌ಗೆ ಮಾದರಿ. ಶ್ರೀರಂಗಪಟ್ಟಣದಲ್ಲಿ ನೂರಾರು ವರ್ಷಗಳಿಂದ ಇರುವ ದೇವಸ್ಥಾನವನ್ನು ಖಬರ್‌ಸ್ಥಾನ ಎಂದು ದಾಖಲೆಯಲ್ಲಿ ಬರೆಸಿದ್ದಾರೆ. ಲವ್‌ ಜಿಹಾದ್‌ ಮಾಡಿ ಹಿಂದೂ ಹೆಣ್ಣುಮಕ್ಕಳನ್ನು ಮತಾಂತರ ಮಾಡಲಾಗಿದೆ. ಈಗ ಲ್ಯಾಂಡ್‌ ಜಿಹಾದ್‌ ಮೂಲಕ ರೈತರ ಜಮೀನು ಪರಿವರ್ತನೆ ಮಾಡುತ್ತಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ನ ಮಗುವಿನಂತೆ ನಿದ್ರಿಸಿ ಎಂಬ ಘೋಷಣೆಯಂತೆ, ಭಯೋತ್ಪಾದಕರು ಹಾಗೂ ಮೂಲಭೂತವಾದಿಗಳು ಕರ್ನಾಟಕದಲ್ಲಿ ಮಗುವಿನಂತೆ ಆರಾಮಾಗಿ ನಿದ್ರಿಸಬಹುದು. ಭಯೋತ್ಪಾದಕರು ಡಿಕೆ ಶಿವಕುಮಾರ್‌ ಅವರ ಸಹೋದರರಾಗಿದ್ದಾರೆ. ಭಯೋತ್ಪಾದನೆ ಮಾಡಿದವರನ್ನು ನಮ್ಮವರು ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂಬಿಕೆ ಉಳಿಸಿಕೊಳ್ಳದ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಮುಸ್ಲಿಂ ಗಲಭೆಕೋರರ ಕೇಸುಗಳನ್ನು ವಾಪಸ್‌ ಪಡೆದರು. ಗಣೇಶ ಮೂರ್ತಿಯನ್ನೇ ಬಂಧನ ಮಾಡಿದರು. ಕೇವಲ ಮತಕ್ಕಾಗಿ ಇಡೀ ಕರ್ನಾಟಕವನ್ನೇ ಹಾಳು ಮಾಡುತ್ತಿದ್ದಾರೆ. ಮುಡಾ ಹಗರಣವಾದ ನಂತರ ಸಿಎಂ ಸಿದ್ದರಾಮಯ್ಯನವರ ಹಣೆಯಲ್ಲಿ ಕುಂಕುಮ ಕಾಣಿಸಿಕೊಂಡಿದೆ ಎಂದು ಟೀಕಿಸಿದರು.

ಕಾಯ್ದೆಯಲ್ಲಿ ಬದಲಾವಣೆ ತನ್ನಿ

ವಕ್ಫ್‌ ಬೋರ್ಡ್‌ ಈಗ ಸಾಬರ ಬೋರ್ಡ್‌ ಆಗಿದ್ದು, ಸಿಎಂ ಸಿದ್ದರಾಮಯ್ಯನವರು ಬೇಕಿದ್ದರೆ ಎಲ್ಲ ಭೂಮಿಯನ್ನು ಈ ಬೋರ್ಡ್‌ಗೆ ಬರೆದುಬಿಡಬಹುದು. ಇವೆಲ್ಲ ದಾನ ಕೊಟ್ಟ ಜಮೀನು ಎಂದು ವಕ್ಫ್‌ ಮಂಡಳಿ ಹೇಳುತ್ತಿದೆ. ಮುಜರಾಯಿ ಇಲಾಖೆಗೂ ದಾನದಿಂದ ಭೂಮಿ ಬಂದಿದೆ. ಆದರೆ ಅದು ಮಾತ್ರ ಸರ್ಕಾರಿ ಆಸ್ತಿಯಾಗುತ್ತದೆ. ಆದರೆ ವಕ್ಫ್‌ ಬೋರ್ಡ್‌ಗೆ ದಾನದಿಂದ ಬರುವ ಭೂಮಿ ಮಾತ್ರ ಸರ್ಕಾರಿ ಆಸ್ತಿಯಾಗುವುದಿಲ್ಲ. ಹೀಗೆಯೇ ಕಾಂಗ್ರೆಸ್‌ ರಾಜ್ಯವನ್ನು ಹಾಳು ಮಾಡಿದರೆ ಹಿಂದೂಗಳು ಈ ಆಟ ನಡೆಯಲು ಬಿಡುವುದಿಲ್ಲ. ಕೂಡಲೇ ಎಚ್ಚೆತ್ತುಕೊಂಡು ಕಾಯ್ದೆಯಲ್ಲಿ ಬದಲಾವಣೆ ಮಾಡಲಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಯ ಮಾತನ್ನು ನಂಬಲ್ಲ

ಸಿದ್ದರಾಮಯ್ಯನವರ ಮಾತನ್ನು ಯಾರೂ ನಂಬುವುದಿಲ್ಲ. ಅವರು ಯಾವಾಗ ಬೇಕಾದರೂ ಮಾತು ಬದಲಿಸುತ್ತಾರೆ. ರೈತರಿಗೆ ಸಂಪೂರ್ಣವಾಗಿ ಜಮೀನಿನ ದಾಖಲೆಗಳು ಸಿಕ್ಕಿ, ಅವರ ಹೆಸರಿಗೆ ಜಮೀನು ಸಂಪೂರ್ಣವಾಗಿ ನೋಂದಣಿಯಾಗುವವರೆಗೂ ಬಿಜೆಪಿ ಹೋರಾಟ ಮಾಡಲಿದೆ.

ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಈ ಸಮಿತಿ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ವಕ್ಫ್‌ ಬೋರ್ಡ್‌ ಆಸ್ತಿ ಕಬಳಿಕೆ ಒಂದು ದಂಧೆಯಾಗಿದ್ದು, ಇದನ್ನು ಮಟ್ಟ ಹಾಕಬೇಕಿದೆ ಎಂದರು.

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!