ಕೋವಿಡ್ ಸಮಯದಲ್ಲಿ ನಿಮ್ಮ ನೋವಿಗೆ ಸ್ಪಂದಿಸದವರು, ಈಗ ಮಗ, ಮೊಮ್ಮಗನಿಗೆ ಮತ ಕೇಳಲು ಬಂದಿದ್ದಾರೆ: ಡಿಕೆ ಸುರೇಶ್

ರಾಮನಗರ: ಮುಖ್ಯಮಂತ್ರಿಯಾಗಿದ್ದರೂ ಕುಮಾರಣ್ಣ ನಿಮ್ಮ ಸಮಸ್ಯೆ ಬಗೆಹರಿಸಲಿಲ್ಲ. ತಾಜ್ ವೆಸ್ಟ್ ಎಂಡ್ ಹೊಟೇಲ್ ಒಳಗೆ ದಳದ ಕಾರ್ಯಕರ್ತರನ್ನು ಬಿಡದ ಕಾರಣ, ನಿಮ್ಮ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ” ಎಂದು ಮಾಜಿ ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರ ಪರ ಕೋಡಂಬಳ್ಳಿ, ಅಕ್ಕೂರು, ಅರಲಾಳುಸಂದ್ರ, ಮೆಣಸಿಗನಹಳ್ಳಿ ಗ್ರಾಮದಲ್ಲಿ ಸುರೇಶ್ ಅವರು ಮಂಗಳವಾರ ಪ್ರಚಾರ ಮಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು.

ಚನ್ನಪಟ್ಟಣ ಕ್ಷೇತ್ರದ ಜನರ ಆಶೀರ್ವಾದದಿಂದ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದರು. ಮುಖ್ಯಮಂತ್ರಿ ಆದವರಿಗೆ ತಾಲ್ಲೂಕಿನ ಅಭಿವೃದ್ಧಿ ಮಾಡಲು ಎಷ್ಟು ಸಮಯ ಬೇಕು?

ವಿರೂಪಾಕ್ಷಿಪುರ, ಅಕ್ಕೂರು ಹೋಬಳಿಯ ಸಮಸ್ಯೆ ಏನು? ಈ ಭಾಗದ ರೈತರ ಸಮಸ್ಯೆ ಏನು ಎಂದು ಗೊತ್ತಿದ್ದರೆ ಅವುಗಳನ್ನು ಬಗೆಹರಿಸಲು ಹತ್ತರಿಂದ ಹದಿನೈದು ದಿನಗಳು ಸಾಕು.

ನೀವು ಮುಖ್ಯಮಂತ್ರಿ ಮಾಡಿದರೂ ಕುಮಾರಸ್ವಾಮಿ ಅವರಾಗಲಿ ಅಥವಾ ಜೆಡಿಎಸ್ ಮುಖಂಡರಾಗಲಿ ನಿಮ್ಮ ಊರಿನ ಋಣ ತೀರಿಸುವ ಕೆಲಸ ಮಾಡಲಿಲ್ಲ. ನೀವು ಅವರನ್ನು ಮುಖ್ಯಮಂತ್ರಿಗಿಂತ ಇನ್ನೇನು ಮಾಡಲು ಸಾಧ್ಯ? ನಿಮ್ಮ ಸಮಸ್ಯೆ ಬಗೆಹರಿಸಲು ಅವರಿಗೆ ಶಕ್ತಿ ಇರಲಿಲ್ಲವೇ? ಈ ಭಾಗದ ಮುಖಂಡರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಆಗುತ್ತಿರಲಿಲ್ಲವೇ? ಅಥವಾ ನಿಮ್ಮನ್ನು ಅವರಿದ್ದ ವೆಸ್ಟ್ ಎಂಡ್ ಹೋಟೆಲ್ ಒಳಗೆ ಬಿಡುತ್ತಿರಲಿಲ್ಲವೇ?

ಜೆಡಿಎಸ್ ಕಾರ್ಯಕರ್ತರನ್ನು ವೆಸ್ಟ್ ಎಂಡ್ ಹೋಟೆಲ್ ಒಳಗೆ ಬಿಡುತ್ತಿರಲಿಲ್ಲವಂತೆ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಿ ಕೆಲಸ ಮಾಡಲು ಆಗಲಿಲ್ಲವಂತೆ. ಈಗ ಮಗನನ್ನು ಕರೆತಂದು ಕೆಲಸ ಮಾಡುತ್ತೇವೆ ಎಂದು ಕಣ್ಣೀರು ಹಾಕುತ್ತಿದ್ದಾರೆ.

ಮುಖ್ಯಮಂತ್ರಿ ಆದಾಗಲೇ ನಿಮ್ಮ ಕಷ್ಟ ಕೇಳದವರು, ಕೋವಿಡ್ ಸಮಯದಲ್ಲಿ ನಿಮ್ಮ ನೋವಿಗೆ ಸ್ಪಂದಿಸದವರು, ಈಗ ಮಗ, ಮೊಮ್ಮಗನಿಗೆ ಈ ಜನರಿಂದ ಮತ ಹಾಕಿಸಿಕೊಳ್ಳಲು ಬಂದಿದ್ದಾರೆ.

ಹಣ ಕೊಟ್ಟು ಮತ ಹಾಕಿಸಿಕೊಳ್ಳುವುದಾಗಿ ಹೇಳಿದ್ದಾರಂತೆ. ಮತದಾರರು ಎರಡು ಬಾರಿ ಮತ ಹಾಕಿದಾಗ ಹಣ ಪಡೆದಿದ್ದರೆ? ಕುಮಾರಸ್ವಾಮಿ ಅವರನ್ನು ನಿಮ್ಮವರು ಎಂದು ಭಾವಿಸಿ ಮನೆ ಮಗನಾದ ಯೋಗೇಶ್ವರ್ ಮರೆತು ಮತ ಹಾಕಿದಿರಿ. ಹೀಗಾಗಿ ಈ ಬಾರಿ ಕುಮಾರಣ್ಣನ ನೋಟು, ಯೋಗೇಶ್ವರ್ ಗೆ ಓಟು ಎಂದು ತೀರ್ಮಾನ ಮಾಡಿ.

ನಾವು ಗ್ಯಾರಂಟಿ ಯೋಜನೆ ಕೊಟ್ಟು ಕುಮಾರಣ್ಣ, ಅಶೋಕಣ್ಣ ನಿಂದ ಬೈಸಿಕೊಳ್ಳುತ್ತಿದ್ದೇವೆ. ನಾವು ಯೋಜನೆ ಜಾರಿ ಮಾಡುವಾಗ ಜಾತಿ ನೋಡಿದ್ದೇವೆಯೇ? ಆದರೂ ಪ್ರಧಾನಮಂತ್ರಿಗಳು ಮಹಿಳೆಯರಿಗೆ 2 ಸಾವಿರ ಕೊಟ್ಟು ರಾಜ್ಯ ಹಾಳುಮಾಡಿದ್ದೇವೆ ಎಂದು ಟೀಕಿಸುತ್ತಿದ್ದಾರೆ”.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]