ಬೆಂ.ಗ್ರಾ.ಜಿಲ್ಲೆ; ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ (Government school student selected for state level)
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿಯ ಕ್ರೀಡಾಂಗಣದಲ್ಲಿ, ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ/ಬಾಲಕಿಯರ ಕ್ರೀಡಾಕೂಟ ಇಂದು ನಡೆಯಿತು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ತೇಜಸ್ವಿನಿ 100ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಾಸಲು ಶಾಲೆ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಕೀರ್ತಿ ಸಾರಿದ ವಿದ್ಯಾರ್ಥಿನಿ ತೇಜಸ್ವಿನಿ ಅವರನ್ನು ಮುಖ್ಯಶಿಕ್ಷಕ ರಾಮಚಂದ್ರ, ಶಿಕ್ಷಕರಾದ ಸುರೇಶ್ ಹಾಗೂ ರವಿಚಂದ್ರ ಅಭಿನಂದನೆ ಸಲ್ಲಿಸಿದ್ದಾರೆ.