ಬೆಂಗಳೂರು: HSRP ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ರಾಜ್ಯ ಸರಕಾರ ಮತ್ತೊಂದು ಬಾರಿ ವಿಸ್ತರಿಸಿದ್ದು, ತಿಂಗಳಾಂತ್ಯದವರೆಗೆ ನಂಬರ್ ಫಲಕ ಅಳವಡಿಸಿಕೊಳ್ಳಲು ಸಮಯಾವಕಾಶ ನೀಡಿ ಆದೇಶಿಸಿದೆ.
ಬರೋಬ್ಬರಿ ನಾಲ್ಕು ಬಾರಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಲಾಗಿದ್ದರೂ ಕೂಡಾ ಬಹುತೇಕ ಮಂದಿ ಇನ್ನೂ ನಂಬರ್ ಪ್ಲೇಟ್ ಬದಲಾಯಿಸಿಲ್ಲ. ಹೀಗಾಗಿ ರಾಜ್ಯ ಸರಕಾರ ಸೋಮವಾರ ಮತ್ತೊಂದು ಬಾರಿ ಗಡುವು ವಿಸ್ತರಿಸಿದ್ದು, ನ.30ರವರೆಗೆ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಅವಕಾಶ ನೀಡಿದೆ.
ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.
2019ರ ಏಪ್ರಿಲ್ಗೂ ಮೊದಲು ನೋಂದಾವಣೆ ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಗೊಳಿಸಲಾಗಿದೆ.
ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮ ಒಳಗೊಂಡಿರುವ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ ಎಂದು ರಾಜ್ಯ ಸರಕಾರ ಆದೇಶಿಸಿದೆ.