ಬೆಂಗಳೂರು ನಗರ ಜಿಲ್ಲೆ: ಪಶುಪಾಲನಾ ಇಲಾಖೆ ವತಿಯಿಂದ 2024-25ನೇ ಸಾಲಿನ ರೈತರ ತರಬೇತಿ ಕಾರ್ಯಕ್ರಮವನ್ನು ನವೆಂಬರ್ 20 ಮತ್ತು 21 ರಂದು ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತರು ನವೆಂಬರ್ 16 ಸಂಜೆ 4.00 ಗಂಟೆಯೊಳಗೆ ಸ್ಥಳೀಯ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಅಥವಾ ವಿಸ್ತರಣಾಧಿಕಾರಿಗಳು, ಪಶುವೈದ್ಯಕೀಯ ಮತ್ತು ಪಶುಪಾಲನಾ ಇಲಾಖೆ ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಇಲ್ಲಿ ನೋಂದಣಿ ಮಾಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9620360369 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಪೂರ್ವ ತಾಲ್ಲೂಕು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.