Where is DK? Where is HDK..?: ಗುಡುಗಿದ ಮಾಜಿ ಪ್ರಧಾನಿ HDD..!

ಚನ್ನಪಟ್ಟಣ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಘೋಷಣೆ ಮಾಡಿದರು.

ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಅವರು ಮಾತನಾಡಿದರು.

ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌‌ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಅಳಿಸಿದ್ದಾರೆ.

ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ

ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. 55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನಾನು ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಸಿದ್ದರಾಮಯ್ಯ ಬಳಿ‌ ನೀವು ಕೇಳಿ.

ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ. ನಿಮ್ಮನ್ನು ‌ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ ಎಂದರು ದೇವೇಗೌಡರು.

Where is DK? Where is HDK..? Where is Kumaranna? Where is DK? ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ನಿಖಿಲ್ ನನ್ನ ನಾನೇ ರಾಜ್ಯ ನಾಯಕನನ್ನಾಗಿ ಮಾಡ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದು ದೇವೆಗೌಡರು ಹೇಳಿದರು.

ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು ಎಂದ ನಟಿ ತಾರಾ

ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು. ತಾಯಿ ಭಾವನೆ ಇದ್ದವರಿಗೆ ಮಾತ್ರ ಕಣ್ಣಿರು ಬರುತ್ತದೆ. ಏನೋ ಟೀಕೆ ಮಾಡಬಾರದು ಎಂದು ಬಿಜೆಪಿ ಹಿರಿಯ ನಾಯಕಿ ಹಾಗೂ ನಟಿ ತಾರಾ ಹೇಳಿದರು.

ದೇವೇಗೌಡರ ಜತೆ ನಿಲಸಂದ್ರದಲ್ಲಿ ನಿಖಿಲ್ ಪರ ಪ್ರಚಾರ ಮಾಡಿದ ತಾರಾ ಅವರು, ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ ಎಂದರು.

ಅಭಿವೃದ್ಧಿ ಬಗ್ಗೆ ಮಾತಾಡಿದರೆ ಬಹಳ‌ ಮಾತಾಡಬಹುದು. ಎಲ್ಲರಿಗೂ ಒಂದು ಅವಕಾಶ ಕೊಟ್ಟಿದ್ದೀರಿ. ನಿಖಿಲ್ ಕುಮಾರಸ್ವಾಮಿಗೆ ಒಂದು ಅವಕಾಶ ಕೊಡಿ. ಈ ಕ್ಷೇತ್ರಕ್ಕೆ ದೇವೆಗೌಡರು, ಕುಮಾರಸ್ವಾಮಿ ಏನ್ ಮಾಡಿದ್ದಾರೆ ಅಂತ ನೆನಪು ಮಾಡಿಕೊಳ್ಳಿ. ನೂರಾರು ಕೆರೆ ತುಂಬಿದವರು ಕುಮಾರಸ್ವಾಮಿ. ಆದರೆ, ಯಾರೋ ಕೆರೆ ತುಂಬಿಸಿದವರು ಅಂತಾರೆ. ಇದು ಸರಿಯಲ್ಲ ಎಂದು ತಾರಾ ಅವರು ಹೇಳಿದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!