ವಕ್ಫ್ ವಿವಾದ: ರೈತ ಆತ್ಮಹತ್ಯೆಯೆಂದು ಸುಳ್ಳು ಸುದ್ದಿ.. ಸಂಸದ ತೇಜಸ್ವಿ ಸೂರ್ಯ, E-Paper ಸಂಪಾದಕನ ವಿರುದ್ಧ FIR..!

ಬೆಂಗಳೂರು: ವಕ್ಫ್ ಜಮೀನು ನೋಟೀಸ್ ವಿವಾದ ರಾಜ್ಯ ಮತ್ತು ರಾಷ್ಟ್ರದ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮರ ಜೋರಾಗಿದೆ.

ಇದರ ಬೆನ್ನಲ್ಲೇ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು: ಹಾವೇರಿಯಲ್ಲಿ ರೈತ ಆತ್ಮಹತ್ಯೆ! ಎಂಬ ಶಿರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟಿಸಿದ ಮಾಧ್ಯಮ ಸಂಸ್ಥೆಯ ಸಂಪಾದಕ ಹಾಗೂ ಈ ಸುದ್ದಿಯನ್ನು ಪರಿಶೀಲಿಸದೆ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲಾಗಿದೆ.

ಈ ಕುರಿತು ಸುನಿಲ ಎನ್ನುವವರು ನೀಡಿದ ದೂರಿನ ಮೇರೆಗೆ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವರ: ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದಕ್ಕೆ ಹಾವೇರಿಯಲ್ಲಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.. ಸಧ್ಯ ರೈತರು ವಕ್ಫ್ ನೋಟಿಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಸುದ್ದಿಯನ್ನು ಪ್ರಸಾರ ಮಾಡಿರುತ್ತಾರೆ.

ನಂತರ ಈ ಸುದ್ದಿಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ಯಾಗ್ ಮಾಡಿ ತಮ್ಮ @tejasvi_surya ‘X’ A farmer in Haveri commits suicide after finding his land is taken over by Waqf!, In their haste to appease minorities, CM @siddaramaiah and minister @BZZameerAhmedK have unleashed catastrophic effects in Karnataka that are becoming impossible to contain with every passing day ಅಂತಾ ಇತ್ಯಾದಿ ಪೋಸ್ಟ್ ಮಾಡಿರುತ್ತಾರೆ.

ನಂತರ ನಾನು ಪ್ರಕಟವಾಗಿರುವ ಸುದ್ದಿಯಲ್ಲಿ ಬಂದಿರುವ ಮಾಹಿತಿಯನ್ನು ಪೊಲೀಸ್ ಅಧೀಕ್ಷಕರು, ಹಾವೇರಿ ಜಿಲ್ಲೆ ಅವರಿಗೆ ತಿಳಿಸಿದಾಗ, ಮೇಲ್ಕಂಡ ಸದರಿ ಸುದ್ದಿಯ ಬಗ್ಗೆ Fact Check ಮಾಡುವಂತೆ ತಿಳಿಸಿದರು.

ನಾನು ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಸಿಸ್ಟಂ ಎಡ್ಡಿನಿಸ್ಟ್ರೇಟರ್ ಪ್ರಕಾಶ ಗಾಯದ ಇವರು ಸೇರಿ Fact Check ಮಾಡಿದಾಗ, ಪ್ರಸ್ತುತದಲ್ಲಿ ಹಾವೇರಿ ಜಿಲ್ಲೆಯಲ್ಲಿ ಈ ರೀತಿ ನಕ್ಷ ವಿಷಯಕ್ಕೆ ಸಂಬಂಧಿಸಿದಂತೆ ರೈತ ಆತ್ಮಹತ್ಯೆ ಪ್ರಕರಣ ನಡೆದಿರುವುದಿಲ್ಲ.

ಆದರೆ E-Paper ಗಳಲ್ಲಿ ಬಂದಂತ ಸುದ್ದಿ ದಿನಾಂಕ: 06/01/2022 ರಂದು ಆಡೂರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರನಗಿರಿ ಗ್ರಾಮದ ರೈತ ಸಾಲದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿಷಯವಾಗಿದ್ದು, ಈ ಕುರಿತು ಈಗಾಗಲೆ ಆಡೂರ ಪೊಲೀಸ್ ಠಾಣೆ ಯುಡಿಆರ್ ನಂ. 3/2022 ಕಲಂ 174 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿ ಅಂತಿಮ ವರದಿಯನ್ನು ತಹಶಿಲ್ದಾರ ಹಾನಗಲ್ ರವರಿಗೆ ಸಲ್ಲಿಸಿದ್ದು, ಸದರಿ ಪ್ರಕರಣ ಮುಕ್ತಾಯವಾಗಿರುತ್ತದೆ. ಇದೇ ಸುದ್ದಿಯನ್ನು ಪ್ರಸ್ತುತ ವಕ್ಫ್ ವಿಚಾರಕ್ಕೆ ನಡೆದಿದೆ ಅಂತಾ ಬಿಂಬಿಸಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವ ಬಗ್ಗೆ ಪೊಲೀಸ್ ಅಧೀಕ್ಷಕರಿಗೆ ತಿಳಿಸಿದಾಗ, ಈ ಬಗ್ಗೆ ದೂರು ನೀಡುವಂತೆ ತಿಳಿಸಿದ ಮೇರೆಗೆ ದೂರು ನೀಡಲಾಗಿದೆ.

ಈ ರೀತಿಯ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ತಮ್ಮ @tejasvi_surya ಎಂಬ “X” ಖಾತೆಯಲ್ಲಿ ಸುಳ್ಳು ಸುದ್ದಿಯನ್ನು ಪೋಸ್ಟ್ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಸುಳ್ಳು ಸುದ್ದಿ ಪ್ರಸಾರ ಮಾಡಿದ ಸುದ್ದಿ ಸಂಸ್ಥೆಯ ಸಂಪಾದಕರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!