ಮೋದಿಯವರೇ ಜನ ಸಾಯುವಾಗ ನಿಮ್ಮ ಪಕ್ಷದವರ ಸಾವಿನ ವ್ಯಾಪಾರ ಕಾಣ್ಲಿಲ್ವಾ..?; ಸಿಎಂ ಸಿದ್ದರಾಮಯ್ಯ ಗುಟುರು

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಸೋಲಿನ ದು:ಸ್ವಪ್ನದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಹೊರಬಂದಿಲ್ಲ ಎಂದು ಕಾಣಿಸುತ್ತದೆ. ಹೋದಲ್ಲಿ ಬಂದಲ್ಲಿ ಮೋದಿಯವರು ಕರ್ನಾಟಕವನ್ನು ಮತ್ತೆ ಮತ್ತೆ ತಮ್ಮ ಭಾಷಣದಲ್ಲಿ ಎಳೆದು ತರುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ ಮದ್ಯ ಮಾರಾಟಗಾರರು ನೀಡಿರುವ ರಾಜಕೀಯ ಪ್ರೇರಿತ ದೂರು ಅಷ್ಟು ಬೇಗ ಮೋದಿಯವರನ್ನು ತಲುಪಿ ಬಿಟ್ಟಿದೆ ಎಂದು ಕಿಡಿಕಾರಿರುವ ಅವರು, ಕೊರೊನಾ ಕಾಲದ ಭ್ರಷ್ಟಾಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರನ್ನು ಪ್ರಾಸಿಕ್ಯೂಟ್ ಮಾಡುವಂತೆ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದ ತನಿಖಾ ಸಮಿತಿ ಮಾಡಿರುವ ಶಿಫಾರಸಿನ ಸುದ್ದಿ ಅವರಿಗಿನ್ನೂ ತಲುಪಿಲ್ಲ ಎಂದು ಕಾಣುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರೇ ಕೊರೊನಾ ಕಾಲದಲ್ಲಿ ಅಸಹಾಯಕ ಜನ ಸಾಯುತ್ತಿರುವಾಗ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸರ್ಕಾರ ಸಾವಿನ ವ್ಯಾಪಾರ ಮಾಡುತ್ತಿದ್ದದ್ದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ?

ನಿಮ್ಮ ಪಕ್ಷದ ಸರ್ಕಾರ 40% ಕಮಿಷನ್ ಸುಲಿಗೆ ನಡೆಸುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ನಿಮಗೆ ಖುದ್ದಾಗಿ ದೂರು ನೀಡಿದರೂ ಆ ಬಗ್ಗೆ ನೀವು ತುಟಿ ಬಿಚ್ಚಿರಲಿಲ್ಲ. ಸಚಿವರೊಬ್ಬರ ಕಿರುಕುಳದಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡರೂ ನೀವು ಪ್ರತಿಕ್ರಿಯಿಸಿರಲಿಲ್ಲ.

ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಬೆಳಗೆದ್ದು ಘೋಷಣೆ ಕೂಗುವ ನೀವು ತಮ್ಮ ಮನೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುವುದಿಲ್ಲ ಯಾಕೆ?

ಗ್ಯಾರಂಟಿ ಕಾರ್ಯಕ್ರಮಗಳನ್ನು ನೂರಕ್ಕೆ ನೂರರಷ್ಟು ನಾವು ಅನುಷ್ಠಾನಕ್ಕೆ ತಂದಿದ್ದರೂ ಮಹಾರಾಷ್ಟ್ರದಲ್ಲಿ ನಿಮ್ಮ ಪಕ್ಷ ಸುಳ್ಳು ಹೇಳುವ ಜಾಹೀರಾತು ಪ್ರಕಟಿಸುತ್ತದೆ. ನೀವು ಹೇಳುತ್ತಾ ಬಂದಿರುವ ಸುಳ್ಳುಗಳಿಂದಲೇ ಅವರು ಪ್ರೇರಣೆ ಪಡೆದುಕೊಂಡಿರುವುದು ಸ್ಪಷ್ಟ.

ನಾಯಕರೇ ಸುಳ್ಳುಕೋರರಾದರೆ ಅನುಯಾಯಿಗಳು ಸತ್ಯವಂತರಾಗಲು ಹೇಗೆ ಸಾಧ್ಯ? ಆಗಿರುವ ತಪ್ಪನಾದರೂ ಒಪ್ಪಿಕೊಂಡು ಕ್ಷಮೆ ಕೇಳಿ ಎಂದು ನಾನು ನಿಮ್ಮನ್ನು ಕೋರಿದ್ದೆ. ಆದರೆ ನೀವು ಇಲ್ಲಿಯ ವರೆಗೆ ಪ್ರತಿಕ್ರಿಯಿಸಿಲ್ಲ, ಯಾಕೆ?

ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಗ್ಯಾರಂಟಿ ಯೋಜನೆಗಳು ನಿಮ್ಮ ಕಣ್ಣು ಕುಕ್ಕುತ್ತಿರುವುದನ್ನು ನಾವು ಅರ್ಥಮಾಡಿಕೊಳ್ಳಬಲ್ಲೆವು. ಇದಕ್ಕಾಗಿ ಕರ್ನಾಟಕದ ಕಾಲೆಳೆಯುತ್ತಲೇ ಇದ್ದೀರಿ. ಕರ್ನಾಟಕಕ್ಕೆ ಬರುವ ಹುಮ್ಮಸ್ಸಿನಲ್ಲಿರುವ ಉದ್ಯಮಿಗಳನ್ನು ನಿಮ್ಮ ಸ್ಥಾನದ ಬಲದಿಂದ ತಡೆದು ಗುಜರಾತ್ ಗೆ ಕರೆದೊಯ್ದು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದೀರಿ.

ನಮ್ಮ ಆದಾಯವನ್ನು ಕುಂಠಿತಗೊಳಿಸಬೇಕೆಂಬ ದುರುದ್ದೇಶದಿಂದ ನಮ್ಮ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದ್ದೀರಿ. ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರದೆ ಇದ್ದರೆ ಪ್ರಧಾನಿಯವರು ಕನ್ನಡಿಗರು ಪ್ರಧಾನಿ ಕೋಪಕ್ಕೆ ತುತ್ತಾಗಲಿದ್ದಾರೆ ಎಂದು ಕಳೆದ ಚುನಾವಣೆಯ ಕಾಲದಲ್ಲಿ ನಿಮ್ಮ ಪಕ್ಷದ ಅಧ್ಯಕ್ಷರಾದ ಜೆ.ಪಿ.ನಡ್ಡಾ ನೀಡಿದ್ದ ಎಚ್ಚರಿಕೆ ಇಂದು ನಿಜವಾಗುತ್ತಿದೆ.

ನೀವು ನಿರಂತರವಾಗಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ಮತ್ತು ಅಪಮಾನವನ್ನು ಕನ್ನಡಿಗರು ಬಹಳ ದಿನ ಸಹಿಸಲಾರರು. ನರೇಂದ್ರ ಮೋದಿ ಅವರೇ, ಮೊದಲು ನೀವು ನಮ್ಮೆಲ್ಲರಿಗೆ ಸೇರಿರುವ ದೇಶದ ಪ್ರಧಾನಿಯಾಗಿ, ಕೇವಲ ಪಕ್ಷದ ಪ್ರಚಾರಕನಾಗಿ ಪ್ರಧಾನಿ ಹುದ್ದೆಯ ಗೌರವ ಕಳೆದುಕೊಳ್ಳಬೇಡಿ. ಇದು ನನ್ನ ಸವಿನಯ ಮನವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!