ಪ್ರಧಾನಿ ಮೋದಿ ಸುಳ್ಳು ಆರೋಪಗಳಿಗೆ ಕರ್ನಾಟಕದ ಜನತೆ ಉತ್ತರ ನೀಡಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು: ಮಹಾರಾಷ್ಟ್ರ ಹಾಗೂ ಇತರೆ ವಿಧಾನಸಭೆ ಚುನಾವಣೆಗಳ ಬಗ್ಗೆ ಕೇಂದ್ರ ಸಚಿವರು ಎಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂಬುದರ ಬಗ್ಗೆ ತಮಗೂ ಮಾಹಿತಿ ಇದೆ. ಆದರೆ ಆಧಾರರಹಿತವಾಗಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಚುನಾವಣಾ ವೆಚ್ಚಕ್ಕಾಗಿ ಖರ್ಚು ಮಾಡಲು ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದು ರಾಜಕೀಯಕ್ಕಾಗಿ ಮಾಡಿರುವ ಸುಳ್ಳು ಆರೋಪ ಎಂದು ಹೇಳಿದರು. ಪ್ರ

ಧಾನಮಂತ್ರಿ ನರೇಂದ್ರಮೋದಿಯವರ ಆರೋಪ ಸಾಬೀತುಪಡಿಸಿದರೆ ನಾವು ಯಾವುದೇ ಶಿಕ್ಷೆಗಾದರೂ ಸಿದ್ಧ. ಆಧಾರ ಇಲ್ಲದೇ ಅಷ್ಟು ದೊಡ್ಡ ಹುದ್ದೆಯಲ್ಲಿರುವವರು ಮಾತನಾಡುವುದು ಸರಿಯಲ್ಲ. ಯಾವ್ಯಾವ ಕೇಂದ್ರ ಸಚಿವರು ಎಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಆಧಾರ ಇಲ್ಲದೆ ಮಾತನಾಡುವುದು ಸರಿಯಲ್ಲ ಎಂದರು.

ಮಹಾರಾಷ್ಟ್ರದ ನಾಯಕರು ಚುನಾವಣೆಗೆ ಸಂಬಂಧಪಟ್ಟಂತೆ – ನಮ್ಮ ಜೊತೆ ಮಾತನಾಡಿಯೇ ಇಲ್ಲ. ಅನಗತ್ಯವಾಗಿ ಇಂತಹ ಹೇಳಿಕೆ ನೀಡುವುದು ಒಳ್ಳೆಯದಲ್ಲ. ಕರ್ನಾಟಕದ ಪಂಚಖಾತ್ರಿ ಯೋಜನೆಗಳನ್ನು. ಸರಿಯಾಗಿ ಅನುಷ್ಠಾನಗೊಳಿಸಿಲ್ಲ ಎಂದು ಮತ್ತೊಂದು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾವು 30 ಬಸ್‌ಗಳನ್ನು ಇಲ್ಲಿಂದಲೇ ವ್ಯವಸ್ಥೆ ಮಾಡುತ್ತಿದ್ದೇವೆ. ಕೇಂದ್ರದ ಬಿಜೆಪಿ ನಾಯಕರು, ಮಹಾರಾಷ್ಟ್ರದ ಬಿಜೆಪಿ, ಶಿವಸೇನೆ, ಎನ್‌ಸಿಪಿಯ ನಾಯಕರು ಇಲ್ಲಿಗೆ ಬಂದು ಅಧ್ಯಯನ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಮಹಾರಾಷ್ಟ್ರದ ನಾಯಕರಿಗೆ ವಿಶೇಷ ವಿಮಾನ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಯ ಮಾಹಿತಿ ಪಡೆಯಲು ಆಹ್ವಾನಿಸುತ್ತಿದ್ದೇನೆ. ನಮ್ಮ ಗ್ಯಾರಂಟಿ ಸಮಿತಿಗಳ – ಅಧ್ಯಕ್ಷರ ದೂರವಾಣಿ ಸಂಖ್ಯೆಗಳನ್ನು ನೀಡುತ್ತಿದ್ದೇನೆ ಎಂದರು.

ಮಹಾರಾಷ್ಟ್ರದ ನಾಯಕರು ಕರ್ನಾಟಕಕ್ಕೆ ಬಂದು ಮನೆಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳು ಹೇಗೆ ತಲುಪಿವೆ, ಎಷ್ಟು ಪರಿಣಾಮ ಬೀರಿವೆ ಎಂಬುದನ್ನು ಅಧ್ಯಯನ ನಡೆಸಲು ಕಾಂಗ್ರೆಸ್ ಪಕ್ಷದ ವತಿಯಿಂದಲೇ ವೆಚ್ಚ ಭರಿಸಲು ಸಿದ್ಧರಿರುವುದಾಗಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಎಷ್ಟೇ ಅಪಪ್ರಚಾರ ನಡೆಸಿದರೂ ಏನೂ ಪ್ರಯೋಜನವಾಗುವುದಿಲ್ಲ. ಈ ಮೊದಲು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿಯ ಸುಳ್ಳು ಹೇಳಿಕೆಗಳನ್ನು ಮೋದಿ ನೀಡಿದರು. ಜನ ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂಬ ಕಾರಣಕ್ಕೆ ಹತಾಶರಾಗಿ ಪ್ರಧಾನಿ ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.

ಮೈಸೂರಿನಲ್ಲಿ ಸಚಿವರ ವಿರುದ್ಧ ಗಲಾಟೆ ಮಾಡಲಾಗಿದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ. ಸಚಿವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುವ ವ್ಯಕ್ತಿಗಳನ್ನೇ ಹಿಡಿದುಕೊಂಡು ಕಪಾಳಕ್ಕೆ ಹೊಡೆಯಲಾಗಿದೆ. ಆ ವ್ಯಕ್ತಿ ಮೋಸ ಮಾಡಿದ್ದರು ಎಂಬ ಕಾರಣಕ್ಕಾಗಿ ಕಪಾಳಮೋಕ್ಷವಾಗಿದೆ ಎಂದು ನನಗೆ ಯಾರೋ ಬಂದು ಮಾಹಿತಿ ನೀಡಿದರು. ಆದರೆ ಅದನ್ನು ನಾನು ನಂಬಿ ಹೇಳಿಕೆ ನೀಡುವುದಿಲ್ಲ ಎಂದರು.

ಯಾವ ಸಚಿವರಿಗೂ ಈ ರೀತಿ ಹಲ್ಲೆಯಾಗಿಲ್ಲ. ಕೇವಲ ಹಿಟ್ ಅಂಡ್ ರನ್ ಆರೋಪಗಳನ್ನು ಮಾಡುತ್ತಾ ಕಾಲ ಕಳೆಯಲಾಗುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!