ಬೆಂಗಳೂರು: ಹವಾಮಾನ ಇಲಾಖೆಯ ಮಾಹಿತಿ ಅನ್ವಯ ಇಂದು ಸೇರಿ ರಾಜ್ಯದ ಕೆಲವು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್ 13, 14 ಮತ್ತು 15ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ನವೆಂಬರ್ 13ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಮಿಂಚು, ಗುಡುಗು ಸಹಿತ ಹಗುರ ಮಳೆಯಾಗಲಿದೆ. ಉತ್ತರ ಒಳನಾಡು ಭಾಗಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಯ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಕೆಲವೆಡೆ ನವೆಂಬರ್ 13ರಂದು ಮಿಂಚು, ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 14ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಮಿಂಚು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಭಾಗಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಮಿಂಚು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ನವೆಂಬರ್ 14ರಂದು ಮಿಂಚು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 15ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಒಂದೆರಡು ಕಡೆ ಮಿಂಚು, ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)