ಬೆಂಗಳೂರು: ವಕ್ಸ್ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (basavaraj bommai) ಹೈಕೋರ್ಟ್ ಮೊರೆ ಹೋಗಿದ್ದಾರೆ.

ಹಾವೇರಿಯ ಸವಣೂರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು, ನ.16 ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೀಡಿರುವ ನೋಟಿಸ್ ರದ್ದುಪಡಿಸುವಂತೆ ಕೋರಿದ್ದಾರೆ.
ಪೇದೆ ಮಂಜುನಾಥ ಮಣ್ಣಿಯವರ್, ಸವಣೂರು ಠಾಣಾಧಿಕಾರಿಗೆ ದೂರು ನೀಡಿ, ಬೊಮ್ಮಾಯಿ ಮತ್ತಿತರರು ನ.4ರಂದು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
‘ಸವಣೂರಿನಲ್ಲಿ ನಿಂತು ಎಲ್ಲೇ ಕಲ್ಲು ಎಸೆದರೂ ಅದು ಬಿದ್ದ ಜಾಗ ವಕ್ಟ್ ಆಸ್ತಿ ಎನ್ನುವಂತಾಗಿದೆ’ ಎಂದು ಹೇಳಿಕೆ ನೀಡಿರುವುದಾಗಿ ಆರೋಪಿಸಿದ್ದರು.