
ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (bcwd.karnataka) ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್. 05 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ ವಿಳಾಸ: HTTPS://bcwd.karnataka.gov.in/ ನಲ್ಲಿ ವಿಕ್ಷಿಸಬಹುದು.
ಅಥವಾ ಸಹಾಯವಾಣಿ ಸಂಖ್ಯೆ: 080-22449999 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						