ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ: ಗುಡುಗಿದ ಸಿಎಂ

ಟಿ.ನರಸೀಪುರ: ED, CBI, IT ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ನಾನು ನೆನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ: ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ. ರಾಜ್ಯದ ಜನ‌ರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾ ಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಕರೆ ನೀಡಿದರು.

ಬಿಜೆಪಿ ಇವತ್ತಿನವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ.

ಈ ಬಾರಿ ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದಾರೆ. ಎಲ್ಲಿಂದ ಬರತ್ತೆ ಈ ಹಣ? ಯಡಿಯೂರಪ್ಪ, ಬೊಮ್ಮಾಯಿ, ಆರ್.ಅಶೋಕ್ ಪ್ರಿಂಟ್ ಹಾಕಿದ್ದಾ ಈ ಹಣ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ. ಆದರೆ ನಮ್ಮ ಶಾಸಕರು ಇವರ ಆಮಿಷಕ್ಕೆ ಒಳಗಾಗಲಿಲ್ಲ ಎಂದರು.

ಬಿಜೆಪಿಯವರು ಗ್ಯಾರಂಟಿಯ ಹಣ ತಗೊತಾ ಇಲ್ವಾ? ಎದೆ ಮುಟ್ಟಿಕೊಂಡು ಹೇಳಲಿ

ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವೀ ಜಾರಿ ಆದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ.
ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಕೋಟಿ 20 ಲಕ್ಷ ರೂಪಾಯಿ ನೀಡಿದೆ.‌ ಇಂದು ನರಸೀಪುರದಲ್ಲಿ 470 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದರು.

ಹೋಗಲಿ ಈ ಬಿಜೆಪಿಯವರಿಗೆ ನಾನು ನೇರವಾಗಿ ಒಂದು ಪ್ರಶ್ನೆ ಕೇಳ್ತೀನಿ. ರಾಜ್ಯದಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಫಲಾನುಭವಿಗಳಲ್ಲವಾ? ಬಿಜೆಪಿಯವರು ಉಚಿತವಾಗಿ ಬಸ್ಸಲ್ಲಿ ಓಡಾಡುತ್ತಿಲ್ಲವಾ? ಬಿಜೆಪಿಯವರು ಉಚಿತ ವಿದ್ಯುತ್ ಪಡೆಯುತ್ತಿಲ್ಲವಾ ? ಬಿಜೆಪಿಯವರು ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ಲವಾ? ಇಲ್ಲಾ, ನಾವು ತಗೊತಾ ಇಲ್ಲ ಅಂತ ಬಿಜೆಪಿಯವರು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ ಎಂದು ಸವಾಲೆಸೆದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದು ಎಚ್ಚರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಸಂಸದರಾದ ಸುನಿಲ್ ಬೋಸ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು..!

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!