ಆರೋಗ್ಯ ವಿಮೆ ವ್ಯಾಪ್ತಿಗೆ 500 ದಶಲಕ್ಷ ಜನರು; ಇದು ಜಗತ್ತಿನಲ್ಲಿಯೇ ದಾಖಲೆ ಎಂದ ಕೇಂದ್ರ ಸಚಿವ HD ಕುಮಾರಸ್ವಾಮಿ

ಬೆಂಗಳೂರು: ಆರೋಗ್ಯವಂತ ಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಹುದೊಡ್ಡ ಕ್ರಾಂತಿ ಆಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ 14ನೇ ಬ್ಯಾಚ್ ನ (2023) ಘಟಿಕೋತ್ಸವದಲ್ಲಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಿದರು ಅವರು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಭಾರತ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಯನ್ನು ಕಂಡಿದೆ. ಶ್ರೀಸಾಮಾನ್ಯನಿಗೂ ಅತ್ಯಂತ ಸುಲಭ ದರದಲ್ಲಿ ಆರೋಗ್ಯ ಸೇವೆ ಲಭ್ಯವಾಗುತ್ತಿದೆ. ಪ್ರಧಾನಿಗಳ ಸಾಮಾಜಿಕ ಕಾಳಜಿ ಹಾಗೂ ದೂರದೃಷ್ಟಿಯಿಂದ ಇದೆಲ್ಲಾ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.

ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಮ್ಮ ದೇಶದಲ್ಲಿ ಆರೋಗ್ಯ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿ ಬೆಳೆದಿದ್ದು, ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬೆನ್ನೆಲುಬಾಗಿ ಕೆಲಸ ಮಾಡುತ್ತಿದೆ. ಈಗ ಪ್ರತಿಯೊಬ್ಬ ನಾಗರಿಕನಿಗೂ ಅತ್ಯಂತ ಗುಣಮಟ್ಟದ ವೈದ್ಯ ಸೇವೆ ದೊರೆಯುತ್ತಿದೆ ಎಂದು ಅವರು ಒತ್ತಿ ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳು ಜಾರಿಗೆ ಬಂದಿವೆ. ಅದರಲ್ಲಿ ಆಯುಷ್ಮಾನ್ ಭಾರತ್ ಯೋಜನೆಯು ಒಂದು. ಇದು ಜಗತ್ತಿನಲ್ಲಿಯೇ ಅತಿದೊಡ್ಡ ಆರೋಗ್ಯ ಸೇವಾ ಯೋಜನೆ. ದೇಶದ 500 ದಶಲಕ್ಷ ಜನರು ಆರೋಗ್ಯ ವಿಮೆ ವ್ಯಾಪ್ತಿಗೆ ಬಂದಿದ್ದಾರೆ.

ಜತೆಗೆ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಪಿಎಂ ಆತ್ಮನಿರ್ಭರ್ ಸ್ವಾಸ್ಥ ಭಾರತ್ ಯೋಜನೆ, ಡಿಜಿಟಲ್ ಆರೋಗ್ಯ ಮಿಷನ್, ಮಿಶನ್ ಇಂದ್ರಧನುಷ್, ಜನೌಷಧಿ ಕೇಂದ್ರಗಳ ಸ್ಥಾಪನೆ ಸೇರಿದಂತೆ ಅನೇಕ ಸರಿಸಾಟಿ ಇಲ್ಲದ ಕಾರ್ಯಕ್ರಮಗಳನ್ನು ಮೋದಿ ಸರ್ಕಾರ ಜಾರಿ ಮಾಡಿದೆ ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು.

ವೈದ್ಯಕೀಯ ಕ್ಷೇತ್ರ ಅತ್ಯಂತ ಮಹತ್ವದ್ದು, ಶ್ರೇಷ್ಠವಾದದ್ದು ಆಗಿದ್ದು, ವೈದ್ಯರು ಒಬ್ಬ ವ್ಯಕ್ತಿಯ ಆರೋಗ್ಯವನ್ನೇ ಅಲ್ಲ, ಇಡೀ ದೇಶದ ಆರೋಗ್ಯ ಕಾಪಾಡುತ್ತಾರೆ ಎಂದ ಅವರು; ಈ ದಿನ ವೈದ್ಯ ಪದವಿ ಪಡೆಯುತ್ತಿರುವ ಎಲ್ಲರೂ ಭವಿಷ್ಯದಲ್ಲಿ ಉತ್ತಮ ವೈದ್ಯರಾಗಿ ಸಮಾಜಮುಖಿ ಸೇವೆ ಮಾಡಬೇಕು ಎಂದು ಸಚಿವರು ಮನವಿ ಮಾಡಿದರು.

ರಾಜರಾಜೇಶ್ವರಿ ವೈದ್ಯ ಕಾಲೇಜಿನ ಸಂಸ್ಥಾಪಕ ಕುಲಪತಿ ಡಾ.ಎ.ಸಿ.ಷಣ್ಮುಗಂ, ಕಾಲೇಜಿನ ಅಧ್ಯಕ್ಷ ಅರುಣ್ ಕುಮಾರ್, ಡೀನ್ ಡಾ.ಸತ್ಯಮೂರ್ತಿ, ಕಾರ್ಯ ನಿರ್ವಾಹಕ ನಿರ್ದೇಶಕ ಡಾ.ಎಸ್.ವಿಜಯಾನಂದ ಮುಂತಾದವರು ಉಪಸ್ಥಿತರಿದ್ದರು.

ಇದೇ ಕೇಂದ್ರ ಸಚಿವರು ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಪ್ರಮಾಣಪತ್ರ ವಿತರಿಸಿ ಶುಭ ಕೋರಿದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]