ದೊಡ್ಡಬಳ್ಳಾಪುರ: ನಗರದ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಇದೇ 17ರಂದು ಬೆಳಗ್ಗೆ 6 ಗಂಟೆಗೆ 5 ಕಿ.ಮೀ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿದೆ.

ಕನ್ನಡದ ಉಳಿವಿಗಾಗಿ, ಸ್ಥಳೀಯ ಕನ್ನಡಿಗರಿಗೆ ಉದ್ಯೋಗಕ್ಕಾಗಿ, ಆಡಳಿತದಲ್ಲಿ ಕನ್ನಡ ಭಾಷೆಗಾಗಿ ಓಡೋಣ ಬನ್ನಿ ಎನ್ನುವ ಧೈಯದೊಂದಿಗೆ ಮ್ಯಾರಾಥಾನ್ ನಡೆಯಲಿದೆ.
ಇದನ್ನೂ ಓದಿ: ನಾಳೆ ದೊಡ್ಡಬಳ್ಳಾಪುರ ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ..!
ನಗರದ ಸಿದ್ದಲಿಂಗಯ್ಯ ವೃತ್ತದಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೆ ಸ್ಪರ್ಧೆ ನಡೆಯಲಿದೆ.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮಹಿಳಾ ಮತ್ತು ಪುರುಷ ವಿಭಾಗದಲ್ಲಿ ಪ್ರತ್ಯೇಕವಾಗಿ ಮೂರು ಆಕರ್ಷಕ ಬಹುಮಾನ ನೀಡಲಾಗುತ್ತಿದೆ.
ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ನವೆಂಬರ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9164378187 ಸಂಪರ್ಕಿಸಬಹುದು.