ನ.14 ರಿಂದ 17 ಕೃಷಿ ಮೇಳ: ನೂತನ ತಳಿಗಳ ಬಿಡುಗಡೆ

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ ನ.14 ರಿಂದ 17 ರವರೆಗೆ ಹವಾಮಾನ ಚತುರ ಡಿಜಿಟಲ್ ಕೃಷಿ ಎಂಬ ಘೋಷವಾಕ್ಯದೊಂದಿಗೆ ನಾಲ್ಕು ದಿನಗಳ ಕಾಲ ಜಿಕೆವಿಕೆ ಆವರಣದಲ್ಲಿ ಕೃಷಿಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್ ವಿ ಸುರೇಶ ಅವರು ತಿಳಿಸಿದರು.

Guarantee scheme
ಎನ್ ವಿಶ್ವನಾಥ್

ಜಿಕೆವಿಕೆ ಅವಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ , ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಸಮಾಜ ಮತ್ತು ಕರ್ನಾಟಕ ಹಾಲು ಮಹಾಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿ ವರ್ಷ ನೂತನ ತಳಿಗಳ ಅಭಿವೃದ್ಧಿ, ತಂತ್ರಜ್ಞಾನ ಹಾಗೂ ಆವಿಷ್ಕಾರಗಳೊಂದಿಗೆ ಕೃಷಿ ಮೇಳವನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಅದೇ ರೀತಿ ಈ ಬಾರಿಯೂ ಸಹ ನಾಲ್ಕು ನೂತನ ತಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಸುಕಿನ ಜೋಳ ಸಂಕರಣ ಎಂ.ಎ.ಎಚ್ 15-84, ಹಲಸಂದೆ ಕೆಬಿಸಿ-12, ಸೂರ್ಯ ಕಾಂತಿ ಕೆ.ಬಿ.ಎಸ್.ಎಚ್-90 ಹಾಗೂ ಬಾಜ್ರ ನೇಪಿಯರ್ ಪಿ.ಬಿ.ಎನ್-242 ತಳಿಗಳನ್ನು ಅಭಿವೃದ್ಧಿಪಡಿಸಿದ್ದು, ಕೃಷಿಮೇಳದಲ್ಲಿ ಬಿಡುಗಡೆಮಾಡಲಾಗುವುದು ಎಂದರು.

ಡಿಜಿಟಲ್ ಕೃಷಿ ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿ ಚಟುವಟಿಕೆಗಳನ್ನು ಸರಳಗೊಳಿಸಲು ಒತ್ತು ನೀಡಲಾಗಿದೆ. ಮಣ್ಣು ಮತ್ತು ಬೆಳೆಗಳ ಆರೋಗ್ಯ ಪರಿವೀಕ್ಷಣೆಗೆ ಮಲ್ಟಿಸ್ಪೆಕ್ಟ್ರಲ್ ಡ್ರೋನ್, ಕೃಷಿ ಡ್ರೋನ್, ರೋಬೋಟಿಕ್ ಕೃಷಿ ಯಂತ್ರ, ಹಣ್ಣಿನ ವರ್ಗೀಕರಣ ಯಂತ್ರ, ಸ್ವಯಂಚಾಲಿತ ರಸಗೊಬ್ಬರ ಹರಡುವ ಯಂತ್ರ, ಆಳ ನಿಯಂತ್ರಕ ರೋಟವೇಟರ್, ಸ್ವಯಂಚಾಲಿತ ಬೂಮ್ ಸ್ಟೇಯರ್, ಸೌರಶಕ್ತಿ ಚಾಲಿತ ಬರ್ಡ್ ಸ್ಟೇರರ್ಗಳು ಕೃಷಿ ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಕೃಷಿಮೇಳದಲ್ಲಿ ಸಮಗ್ರ ಬೇಸಾಯ ಪದ್ಧತಿ, ಖುಷಿ ಬೇಸಾಯ, ನೂತನ ತಳಿಗಳ ಪ್ರಾತಕ್ಷಿಕೆ, ರೇಷ್ಮೆ ಕೃಷಿ, ತೋಟಗಾರಿಕೆ, ಸಿರಿಧಾನ್ಯ, ಜಲಾನಯನ ನಿರ್ವಹಣೆ, ಸಾವಯವ ಕೃಷಿ. ಮಣ್ಣು ರಹಿತ ಕೃಷಿ ಪದ್ಧತಿ ಹೀಗೆ ಹಲವು ಪ್ರಾತಕ್ಷ್ಮತೆಗಳ ಮೂಲಕ ರೈತರಿಗೆ ಕೃಷಿಯ ಬಗ್ಗೆ ತಿಳಿಸಿಕೊಡಲಾಗುವುದು ಎಂದರು.

ಪ್ರತಿಬಾರಿಯು ಕೃಷಿ ಮೇಳದಲ್ಲಿ ಉತ್ತಮ ಕೃಷಿ ಸಾಧಕರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಬಾರಿ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ಯುವ ರೈತ ಹಾಗೂ ಯುವ ರೈತ ಮಹಿಳೆಯರಿಗೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಕೃಷಿಮೇಳದಲ್ಲಿ ಸುಮಾರು 700 ಮಳಿಗೆಗಳನ್ನು ತೆರೆಯಲಿದ್ದು, ಇಲ್ಲಿ ನೂತನ ತಂತ್ರ ಜ್ಞಾನ, ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ವೈಜ್ಞಾನಿಕ ಸಲಹೆ, ಪರಿಹಾರ, ಪ್ರಾತಕ್ಷ್ಮತೆ ಇರಲಿದ್ದು. ಕೃಷಿ ಮೇಳಕ್ಕೆ ಆಗಮಿಸುವ ರೈತರು ಹಾಗೂ ಸಾರ್ವಜನಿಕರಾಗಿ ಜಿಕೆವಿಕೆಯ ಮಹಾದ್ವಾರದಿಂದ ಕೃಷಿಮೇಳದ ಸಭಾಂಗಣ ತಲುಪಲು ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.

ಪ್ರತ್ಯೇಕ ವಾಹನ ನಿಲುಗಡೆ, ಉಚಿತ ಪ್ರವೇಶ, ರಿಯಾಯಿತಿ ದರದಲ್ಲಿ ಮುದ್ದೆ ಊಟದ ವ್ಯವಸ್ಥೆಯನ್ನು ಕಲ್ಲಿಸಲಾಗಿದ್ದು, ರೈತರುಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರಾದ ಡಾ.ವೈ.ಎನ್.ಶಿವಲಿಂಗಯ್ಯ, ಸಂಶೋಧನಾ ನಿರ್ದೇಶಕರಾದ ಎಚ್.ಎಸ್.ಶಿವರಾಮು ಉಪಸ್ಥಿತರಿದ್ದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!