ವೇತನ ವಿಳಂಬ: 108 ambulance ನೌಕರರಿಂದ ಮುಷ್ಕರದ ವಾರ್ನಿಂಗ್..!

ಬೆಂಗಳೂರು: ಮೂರು ತಿಂಗಳ ವೇತನ ಶನಿವಾರದೊಳಗೆ ನೀಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ 108 ambulance ನೌಕರರು ಎಚ್ಚರಿಕೆ ನೀಡಿದ್ದಾರೆ.

108 ambulance ನೌಕರರಿಗೆ ಆರೋಗ್ಯ ಇಲಾಖೆ ಮತ್ತೆ ಸಂಬಳ ನೀಡಿಲ್ಲ. ಹೀಗಾಗಿ ಸಿಬ್ಬಂದಿಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಶನಿವಾರದೊಳಗೆ ವೇತನ ನೀಡದಿದ್ದರೆ ಸೇವೆಗೆ ಹಾಜರಾಗದಿರಲು ನೌಕರರು ನಿರ್ಧರಿಸಿದ್ದಾರೆ. ಈ ಕುರಿತು ಗುರುವಾರ ಸರಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.

ಆರೋಗ್ಯ ಕವಚ ಯೋಜನೆಯಲ್ಲಿ ಸುಮಾರು ಎರಡು ವರ್ಷಗಳಿಂದ ವೇತನದಲ್ಲಿ ಅನೇಕ ಸಮಸ್ಯೆ ಉಂಟಾಗಿದ್ದು ಹಲವು ಬಾರಿ ಸರಕಾರ ಮತ್ತು ಸಂಸ್ಥೆ ಹಾಗೂ ಸಂಘಟನೆಗಳು ಸಭೆ ಮಾಡಿದರೂ ಸಹ ವೇತನದ ಸಮಸ್ಯೆ ಬಗೆಹರಿದಿಲ್ಲ. ಹೀಗಾಗಿ ಸಂಘಟನೆಯ ವತಿಯಿಂದ ನ್ಯಾಯಾಲಯದ ಮೊರೆ ಹೋಗಿದ್ದು ನ್ಯಾಯಾಲಯ ಸೆ.12ರಂದು ಮಧ್ಯಂತರ ಆದೇಶ ನೀಡಿತ್ತು.

ನ್ಯಾಯಾಲಯದ ಆದೇಶ ಮೂರು ಸಂಘಟನೆಯ ಸರ್ವ ಸದಸ್ಯರು ಸ್ವೀಕರಿಸಿದ್ದರೂ ಸಹ ಸಂಸ್ಥೆ ನಮಗೆ ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಆ ಮೂಲಕ ಮೇಲೋಟಕ್ಕೆ ನ್ಯಾಯಾಲಯದ ಆದೇಶ ಧಿಕ್ಕರಿಸಿರುವುದಾಗಿ ಸಂಘಟನೆ ವತಿಯಿಂದ ಸರಕಾರದ ಅಧಿಕಾರಿಗಳ ಹತ್ತಿರ ಮನವಿ ಮಾಡಿದಾಗ ಸರಕಾರದ ಅಧಿಕಾರಿಗಳು ನಮ್ಮ ಕಡೆಯಿಂದ ಜಿವಿಕೆ ಸಂಸ್ಥೆಯವರಿಗೆ ಸಂಪೂರ್ಣ ಅನುದಾನ ನೀಡಿರುತ್ತೇವೆ. ಹಾಗಾಗಿ ನಮಗೆ ಯಾವುದೇ ಸಂಬಂಧ ಇರುವುದಿಲ್ಲ ಎನ್ನುವ ಉಡಾಫೆ ಉತ್ತರ ನೀಡಲಾಗಿತ್ತು ಎಂದು ನೌಕರರು ಬೇಸರ ವ್ಯಕ್ತಪಡಿಸಿದ್ದಾರೆ.

ಸಿಬ್ಬಂದಿಗಳ ಸಂಸಾರಗಳು ಕಷ್ಟದಲ್ಲಿ: ಸಂಸ್ಥೆಯ ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡರೆ ಸರಕಾರದಿಂದ ಹಣ ಬಂದಿಲ್ಲ ಎಂದು ಹೇಳುತ್ತಿದ್ದು, ಮೂರು ತಿಂಗಳು ಕಳೆದು ನಾಲ್ಕನೇ ತಿಂಗಳ ಮಧ್ಯಭಾಗವಾದರೂ ಸಹ ರಾಜ್ಯದ ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂದು ಇಲ್ಲಿಯವರೆಗೂ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದೇವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸಾರ್ವಜನಿಕರನ್ನು ನೋಡಿಕೊಂಡು ಹೋದರೆ ಕರ್ತವ್ಯ ನಿರತ ಸಿಬ್ಬಂದಿಗಳ ಸಂಸಾರಗಳು ಬೀದಿಗೆ ಬರುವ ಪ್ರಸಂಗ ಉದ್ಭವವಾಗುತ್ತದೆ.

ಅನಿವಾರ್ಯ ಕಾರಣಗಳಿಂದ ನ.16ರ ರಾತ್ರಿ 8 ಗಂಟೆಯ ಒಳಗಾಗಿ 3 ತಿಂಗಳ ಸಂಪೂರ್ಣ ವೇತನ ಪಾವತಿ ಆಗದಿದಲ್ಲಿನ. 16ರ ರಾತ್ರಿ 8 ಗಂಟೆಯ ನಂತರ ಎಲ್ಲಾ ಸಿಬ್ಬಂದಿಗಳು ಕರ್ತವ್ಯದಲ್ಲಿ ಇದ್ದುಕೊಂಡು ಯಾವುದೇ ತುರ್ತು ಸೇವೆ ನೀಡದೆ ಆಂಬ್ಯುಲೆನ್ಸ್‌ ಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]