ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ನಳಂದ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮಕ್ಕಳ ದಿನಾಚರಣೆ ಅಂಗವಾಗಿ ಇಂದಿನ ಮಕ್ಕಳೇ ನಾಳಿನ ದೇಶ ಕಟ್ಟುವ ಪ್ರಜೆಗಳು ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಗಳು ಅವರಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹಾಡು, ನೃತ್ಯ, ಭಾಷಣ, ನಾಟಕ, ಕಥೆ ಹೇಳುವುದು ಇವುಗಳ ಮೂಲಕ ಹೊರಹೊಮ್ಮಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲೆಯ ಪ್ರತಿ ವಿದ್ಯಾರ್ಥಿಗೆ ಕಿರು ಕಾಣಿಕೆಯನ್ನು ನೀಡಲಾಯಿತು.
ಈ ವೇಳೆ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಅನುರಾಧ ಕೆ.ಆರ್., ಮುಖ್ಯ ಶಿಕ್ಷಕರಾದ ಅನಿತಾ ಕೆ.ಪಿ ಮತ್ತು ಸುನೀತಾ.ಪಿ ಇದ್ದರು.