ಬೆಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಸೋದರಮಾವನೊಬ್ಬ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತ ಬಾಲಕಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.
28 ವರ್ಷದ ಸೋದರಮಾವ 16 ವರ್ಷದ ಅಪ್ರಾಪ್ತ ಬಾಲಕಿಗೆ ನನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೂ ಮುನ್ನ ವಾಟ್ಸ್ ಆ್ಯಪ್ ನಲ್ಲಿ USED ಎಂದು ಸ್ಟೇಟಸ್ ಹಾಕಿ, ನನ್ನ ಸಾವಿಗೆ ಸೋದರ ಮಾವನೇ ಕಾರಣ ಎಂದು ಬರೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿದ್ದಾನೆ ಎಂದು ಮೃತ ಬಾಲಕಿಯ ತಾಯಿ ದೂರು ನೀಡಿದ್ದು, ಈ ಹಿನ್ನಲೆ ಆರೋಪಿ ಸೋದರಮಾವನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.