ಬೆಂಗಳೂರು: 108 ಆರೋಗ್ಯ ಕವಚದ ಅಂಬ್ಯುಲೆನ್ಸ್ ಚಾಲಕರಿಗೆ ಸರಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬ್ಯುಲೆನ್ಸ್ ನ್ಯಾಯಯುತವಾಗಿ ಚಾಲಕರಿಗೆ ಸಿಗಬೇಕಾದ ವೇತನವನ್ನ ಕಾಲ ಕಾಲಕ್ಕೆ ಸರಿಯಾಗಿ ಸಂಬಂಧಿಸಿದ ಏಜನ್ಸಿಯವರಿಗೆ ಸರಕಾರ ನೀಡುತ್ತಾ ಬಂದಿದೆ.
ಚಾಲಕರ ವೇತನ ಬಾಕಿ ಉಳಿಸಿಕೊಳ್ಳದಂತೆ ಇಎಂಆರ್ ಏಜನ್ಸಿಯವರಿಗೂ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.
ಆಗಸ್ಟ್, ಸೆಪ್ಟೆಂಬರ್ ತಿಂಗಳ ವೇತನವನ್ನು ಏಜನ್ಸಿಯವರು ಚಾಲಕರಿಗೆ ಪಾವತಿ ಮಾಡಿದ್ದಾರೆ. ಅಕ್ಟೋಬರ್ ತಿಂಗಳ ವೇತನ ಪಾವತಿ ಕೂಡ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						