ಬೆಂಗಳೂರು: ಬಗಹುಕುಂ ಭೂಮಿ ಮಂಜೂರಿಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು ನ.25ರೊಳಗೆ ವಿಲೇವಾರಿ ಮಾಡದ ತಹಶೀಲ್ದಾರ್‌ಗಳ ವಿರುದ್ದ ಕ್ರಮ ಕೈಗೊ ಇುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿ ವಿಲೇವಾರಿ ಕುರಿತಂತೆ ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ತಹಶೀಲ್ದಾರರೊಂದಿಗೆ ವೀಡಿಯೋ ಕಾನ್ವರೆನ್ಸ್ ಮೂಲಕ ಕೃಷ್ಣ ಬೈರೇಗೌಡ ಸಭೆ ನಡೆಸಿದರು.
ಬಗರ್‌ಹುಕುಂ ಮಂಜೂರಾತಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅರ್ಹ ಮತ್ತು ಅನರ್ಹ ಅರ್ಜಿಗಳನ್ನು ತಹಸೀಲ್ದಾರ್‌ಗಳು ನ. 25ರೊಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು.
ಎಲ್ಲ ಜಿಲ್ಲಾಧಿಕಾರಿಗಳು ನ. 26ರಂದು ಬೆಳಗ್ಗೆ ತಮ್ಮ ಜಿಲ್ಲೆ ವ್ಯಾಪ್ತಿಯ ಪಟ್ಟಿಯನ್ನು ಒಟ್ಟುಗೂಡಿಸಿ ನನಗೆ ಸಲ್ಲಿಸಬೇಕು “ಬಗರ್ ಹುಕುಂ” ಮಂಜೂರಾತಿ ಬಡವರ ಕೆಲಸ. ಬಡವರಿಗೆ-ಅರ್ಹ ಫಲಾನುಭವಿಗಳಿಗೆ ಕಾನೂನು ಬದ್ಧವಾಗಿ ಭೂ ಮಂಜೂರುಗೊಳಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಇದೇ ಕಾರಣಕ್ಕೆ ನಾನು ಕಳೆದ ಒಂದು ವರ್ಷದಿಂದ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ.
ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಪ್ರತಿ ತಿಂಗಳೂ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಭೆ ನಡೆಸಿ ಪರಿಶೀಲಿಸುತ್ತಿದ್ದೇನೆ. ಆದರೂ ಕೆಲವು ತಹಶೀಲ್ದಾರರು ಬಡವರ ಕೆಲಸದ ಬಗ್ಗೆ ಅಸಡ್ಡೆ ಧೋರಣೆ ತೋರುತ್ತಿರುವುದು ವಿಷಾದನೀಯ.
ಹೀಗಾಗಿ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತಹಶೀಲ್ದಾರ್ ರಮೇಶ್ ಅವರಿಗೆ ನೊಟೀಸ್ ಜಾರಿಗೊಳಿಸುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಸೂಚಿಸಲಾಗಿದೆ.
ಇದೇ ತಿಂಗಳ 25 ರ ಒಳಗೆ ತಹಶೀಲ್ದಾರರು ಅರ್ಹ-ಅನರ್ಹ ಅರ್ಜಿಗಳನ್ನು ವಿಂಗಡಿಸಿ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳು 26ರ ಬೆಳಗ್ಗೆಯೇ ಇಡೀ ಜಿಲ್ಲೆಯ ಪಟ್ಟಿಯನ್ನು ಒಂದುಗೂಡಿಸಿ ನನಗೆ ಸಲ್ಲಿಸಬೇಕು. ಹಾಗೂ ಡಿಸೆಂಬರ್ ಮೊದಲ ವಾರದಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಡಿಜಿಟಲ್ ಭೂ ಸಾಗುವಳಿ ಚೀಟಿ ನೀಡಬೇಕು ಎಂದು ಇಂದಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಲ್ಲಾ ತಹಶೀಲ್ದಾರರಿಗೂ ಸೂಚಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.