ಬೆಂ.ಗ್ರಾ.ಜಿಲ್ಲೆ: ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ (birsa munda) ಅವರು ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಬ್ರಿಟಿಷರ ವಸಹಾತುಶಾಹಿ ಶೋಷಣೆಯ ವಿರುದ್ಧ ಸಿಡಿದೆದ್ದು ಹೋರಾಡಿದರು. ಇಂದಿನ ಯುವ ಸಮೂಹಕ್ಕೆ ಇವರ ಧೈರ್ಯ, ನಾಯಕತ್ವ ಗುಣಗಳು ಸ್ಪೂರ್ತಿಯಾಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಪ್ರಯುಕ್ತ ಬಿರ್ಸಾ ಮುಂಡಾ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು.
ನಂತರ ಮಾತನಾಡಿ ಅವರು 1890 ರ ದಶಕದಲ್ಲಿ ಬಿರ್ಸಾ ಮುಂಡಾ ಅವರು 25ನೇ ವಯಸ್ಸಿಗೆ ಬ್ರಿಟಿಷರ ಶೋಷಣೆಯ ವಿರುದ್ಧ ಹೋರಾಟ ಮಾಡಿದವರು. ಬ್ರಿಟಿಷ್ ಅಧಿಕಾರಿಗಳು ತಮ್ಮ ಬುಡಕಟ್ಟು ಜನಾಂಗದವರ ಮೇಲೆ ಶೋಷಣೆಗೆ ಮುಂದಾದಾಗ ಅವರ ಭೂಮಿ, ಆಚಾರ, ವಿಚಾರಗಳ ಮೇಲೆ ದೌರ್ಜನ್ಯ ಎಸೆಗುತ್ತಿದ್ದಾಗ, ಅದರ ವಿರುದ್ಧ ಸಿಡಿದ್ದೆದ್ದು ತಮ್ಮ ಹಕ್ಕುಗಳಿಗೆ ಹೋರಾಡಲು ನಾಯಕತ್ವ ವಹಿಸಿಕೊಂಡು ಹೋರಾಡಿದರು. ಹಾಗಾಗಿ ಅವರ ಜನ್ಮದಿನವನ್ನು ಸ್ಮರಣಾರ್ಥ ”ಜನ್ ಜಾತಿಯ ಗೌರವ್ ದಿವಸ್” ಎಂದು ಆಚರಿಸಲಾಗುತ್ತದೆ. ಇತಿಹಾಸದಲ್ಲಿ ಇವರ ಧೈರ್ಯ, ಸಾಹಸ ಮತ್ತು ನಾಯಕತ್ವದ ಗುಣಗಳು ಯುವಕರಿಗೆ ಪ್ರೇರಣೆಯಾಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪಾಂಡುರಂಗ, ಜಿಲ್ಲಾಧಿಕಾರಿಗಳ ಕಛೇರಿ ಸಹಯಕರಾದ ರಾಜೀವ್ ಸುಲೋಚನ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.