ದೊಡ್ಡಬಳ್ಳಾಪುರ; ಯಾವುದೇ ಕಾರಣಕ್ಕೂ ಮಕ್ಕಳ ಆರೋಗ್ಯದ ಬಗ್ಗೆ ತಾತ್ಸಾರ ಮನೋಭಾವ ತೋರದೆ ತುರ್ತಾಗಿ ಚಿಕಿತ್ಸೆ ಕೊಡಿಸಬೇಕಾದ ಹೊಣೆಗಾರಿಕೆ ಪೋಷಕರ ಮೇಲಿದೆ ಎಂದು ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರವೀಣ್ ತಿಳಿಸಿದರು.
ತಾಲೂಕಿನ ಆರೂಢಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರಿಗೂ ಆರೋಗ್ಯದ ಅರಿವು ಇರಬೇಕು. ಆರೋಗ್ಯದ ಬಗ್ಗೆ ಮುಂಜಾಗ್ರತೆ ಇಲ್ಲದೆ ಮಕ್ಕಳು ಬೇಗನೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಮಕ್ಕಳು ಹಾಗೂ ಮನೆಯ ಸ್ವಚ್ಚತೆ ಬಗ್ಗೆ ಹೆಚ್ಚಿನ ಕಾಳಜಿಯನ್ನು ಪೋಷಕರು ವಹಿಸಬೇಕೆಂದರು.
ಮಕ್ಕಳ ದಿನಾಚರಣೆ ಅಂಗವಾಗಿ ಅಂಗನವಾಡಿ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಆಯೋಜಿಸಿಲಾಗಿದ್ದು, ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಹೆಚ್.ನರಸೀಯಪ್ಪ, ಕೆಂಪಲಿಂಗಣ್ಣ, ಗ್ರಾಪಂ ಸದಸ್ಯರಾದ ತಿಪ್ಪರಾಜು, ರಾಧ ಮಂಜುನಾಥ್, ಗಂಗರಾಜಮ್ಮ, ಅಂಗನವಾಡಿ ಕಾರ್ಯಕರ್ತೆ ಶಂಕುತಲಮ್ಮ ಮತ್ತಿತರರಿದ್ದರು.