daily story| ಹರಿತಲೇಖನಿ ದಿನಕ್ಕೊಂದು ಕಥೆ: ಹಣೆಬರಹ

ಒಂದಾನೊಂದು ಕಾಲದಲ್ಲಿ ಸುವರ್ಣಗಿರಿ ಎಂಬ ರಾಜ್ಯದಲ್ಲಿ ಚಂದ್ರಸೇನನೆಂಬ ರಾಜನು ಆಳುತ್ತಿದ್ದನು. ಆತನು ದಾನ, ಧರ್ಮ, ಪೂಜೆ ಪುನಸ್ಕಾರಗಳಿಗೆ ಪ್ರಖ್ಯಾತನಾಗಿದ್ದನು. ‘ನನ್ನ ರಾಜ್ಯದಲ್ಲಿ ಬಡವರೇ ಇರಬಾರದು. ಎಲ್ಲರೂ ಸುಖ ಸೌಭಾಗ್ಯಗಳಿಂದ ಕೂಡಿರಬೇಕು’ ಎಂಬ ಭಾವನೆ ಹೊಂದಿ ತನ್ನ ಪ್ರಜೆಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಕಾಣುತ್ತಿದ್ದನು. ಆಗಾಗ ಸಂಜೆಯ ವೇಳೆ ಮಂತ್ರಿ ಸುಗುಣಾನಂದನೊಡನೆ ವಾಯು ವಿಹಾರಕ್ಕೆ ಹೋಗುತ್ತಿದ್ದನು.

ಒಂದು ದಿನ ಹೀಗೆ ಹೋಗುತ್ತಿರುವಾಗ ಸಂಜೆ ಮುಗಿದು ಕತ್ತಲಾಗುತ್ತ ಬಂತು. ‘ಮಂತ್ರಿಗಳೇ ಬೇಗ ರಾಜಧಾನಿ ಸೇರೋಣ. ಕುದುರೆಯನ್ನು ವೇಗವಾಗಿ ಓಡಿಸಿ’ ಎಂದು ಸೂಚಿಸಿದನು. ಕೊಂಚ ದೂರ ಹೋಗುವುದರಲ್ಲಿ ರಾಜನು ಕುದುರೆಯನ್ನು ನಿಲ್ಲಿಸಿ ‘ಮಂತ್ರಿಗಳೇ ಕತ್ತಲಾಗುತ್ತಾ ಬಂದಿದ್ದರೂ ಕುಟೀರದ ಮುಂದೆ ತೋಟದ ಕೆಲಸ ಮಾಡುತ್ತಿರುವ ವಿಪ್ರ ಯಾರು? ತುಂಡುಬಟ್ಟೆ ಉಟ್ಟು ಚಳಿಯನ್ನು ಲೆಕ್ಕಿಸದ ಆ ಮಹಾ ಪುರುಷ ಯಾರು?’ ಎಂದು ಕೇಳಿದರು. ಆಗ ಮಂತ್ರಿಯು ಆತ ಶೇಷ ಶರ್ಮನೆಂಬ ಪ್ರಖಾಂಡ ಪಂಡಿತ. ಶ್ರಮಜೀವಿ ಎಂದರು.

‘ನಮ್ಮ ರಾಜ್ಯದಲ್ಲಿ ಆತ ಏಕೆ ಇಷ್ಟು ಕಷ್ಟಪಡಬೇಕು? ಅರಮನೆಗೆ ಕರೆಸಿ ಬೇಕಾದ್ದನ್ನು ಕೊಡಿ’ ಎಂದನು.

‘ಕ್ಷಮಿಸಿ ಮಹಾರಾಜ ಆತ ಮಹಾ ಆತ್ಮ ಗೌರವಿ. ಯಾರಿಂದ ಏನೂ ಬೇಡುವುದಿಲ್ಲ. ಯಾರ ಸಹಾಯವನ್ನೂ ಬಯಸುವುದಿಲ್ಲ. ಕಾಯಕ ಮಾಡಿ ಹೆಂಡತಿ ಮಕ್ಕಳನ್ನು ಪೋಷಿಸುತ್ತಿದ್ದಾನೆ’ ಎಂದು ಉತ್ತರಿಸಿದನು ಮಂತ್ರಿ.

‘ಸರಿ ನಡೆಯಿರಿ ಇದಕ್ಕೆ ನಾವೇ ಒಂದು ಉಪಾಯ ಮಾಡೋಣ’ ಎಂದು ಇಬ್ಬರೂ ಹೊರಟರು.

ಮಾರನೆಯ ದಿನ ಶೇಷ ಶರ್ಮನ ತೋಟದಲ್ಲಿ ಒಂದು ಚೀಲ ಸಿಕ್ಕಿತು. ಅದರ ತುಂಬಾ ಚಿನ್ನದ ನಾಣ್ಯಗಳಿದ್ದವು. ಕೂಡಲೆ ಆತ ಅದನ್ನು ಕೈಯಲ್ಲಿ ಹಿಡಿದು ರಾಜ ದರ್ಬಾರಿಗೆ ನಡೆದ ‘ಮಹಾ ಪ್ರಭು ನನ್ನ ತೋಟದಲ್ಲಿ ಚಿನ್ನದ ನಾಣ್ಯಗಳಿರುವ ಈ ಚೀಲ ಸಿಕ್ಕಿದೆ, ಯಾರದೋ ಏನೋ! ವಿಚಾರಣೆ ನಡೆಸಿ ಅವರಿಗೆ ತಲುಪಿಸಿ’ ಎಂದು ಹೇಳಿ ಹೊರಡಲನುವಾದ.

ಆಗ ರಾಜನು ‘ಅದು ಯಾರದೇ ಆಗಲಿ, ನಿಮ್ಮ ತೋಟದಲ್ಲಿ ಸಿಕ್ಕಿದೆ. ನೀವೇ ಅನುಭವಿಸಿ’ ಎಂದನು. ಆಗ ಶೇಷ ಶರ್ಮ ‘ಕ್ಷಮಿಸಿ ಮಹಾ ಪ್ರಭು. ನಿತ್ಯ ನನ್ನ ತೋಟಕ್ಕೆ ಅನೇಕ ಹಕ್ಕಿಗಳು ಬರುತ್ತವೆ. ನವಿಲು, ಜಿಂಕೆಗಳು ಬರುತ್ತವೆ. ಅವು ನಮ್ಮದೆಂದರೆ ದ್ರೋಹವಾಗುವುದಿಲ್ಲವೆ? ಅನೇಕ ಮಂದಿ ದಾರಿಹೋಕರು ನಮ್ಮ ತೋಟದ ಹಣ್ಣು ಹಂಪಲು ತಿಂದು ಹೋಗುತ್ತಾರೆ. ಅವರು ನಮ್ಮವರಾಗುತ್ತಾರೊ? ಕ್ಷಮಿಸಿ ಆ ಹಣ ಯಾರದೋ ಅವರಿಗೆ ಕೊಡಿ’ ಎಂದನು.

‘ನಮ್ಮ ಹಣೆಯಲ್ಲಿ ಬರೆದಿರುವಷ್ಟು ನಮಗೆ ಸಿಕ್ಕಿದೆ. ನಾನು ಅದರಿಂದ ಸುಖವಾಗಿದ್ದೇನೆ’ ಎಂದು ವಂದಿಸಿ ಕುಟೀರಕ್ಕೆ ತೆರಳಿದನು. ಮಂತ್ರಿ ‘ಪ್ರಭು ಹಣೆಬರಹ ಬದಲಾಯಿಸಲು ಬರೆದ ಆ ಬ್ರಹ್ಮನಿಂದಲೇ ಸಾಧ್ಯವಿಲ್ಲ’ ಎಂದನು.

ಕೃಪೆ: ವಿ.ಸತ್ಯನಾರಾಯಣರಾವ್‌, ಯಲಹಂಕ (ಸಾಮಾಜಿಕ ಜಾಲತಾಣ)

ರಾಜಕೀಯ

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ (Donald Trump) ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ (H.D. Deve Gowda)

[ccc_my_favorite_select_button post_id="111998"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!